ಮುಂದಿನ ತಿಂಗಳು ಬೆಂಗಳೂರು ಮೇಯರ್ ಚುನಾವಣೆ; ಪ್ರಮುಖ ಪಕ್ಷಗಳ ಮಧ್ಯೆ ಭಾರೀ ಪೈಪೋಟಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆಗೆ ದಿನಾಂಕ ಮತ್ತೆ ಸನ್ನಿಹಿತವಾಗಿದ್ದು....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆಗೆ ದಿನಾಂಕ ಮತ್ತೆ ಸನ್ನಿಹಿತವಾಗಿದ್ದು, ಪ್ರಮುಖ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಗಳು ಚುನಾವಣೆಯಲ್ಲಿ ಗೆಲ್ಲಲು ಈಗಾಗಲೇ ತಂತ್ರ ರೂಪಿಸುತ್ತಿವೆ. 
ಒಂದೆಡೆ ಜೆಡಿಎಸ್ ಕಾಂಗ್ರೆಸ್ ಜೊತೆ ಮೈತ್ರಿಯನ್ನು ಮುರಿದುಕೊಳ್ಳುವುದಾಗಿ ಹೇಳಿದೆ. ಕಾಂಗ್ರೆಸ್ ನ ಈಗಿರುವ ಮೇಯರ್ ಜಿ.ಪದ್ಮಾವತಿ ಮತ್ತು ಜೆಡಿಎಸ್ ನ ಉಪ ಮೇಯರ್ ಆನಂದ್ ಅವರ ಅಧಿಕಾರಾವಧಿ ಮುಂದಿನ ತಿಂಗಳು ಮುಗಿಯುತ್ತಿದೆ.
ಈ ವರ್ಷ ಮೇಯರ್ ಹುದ್ದೆ ಪರಿಶಿಷ್ಟ ಜಾತಿ ವರ್ಗಕ್ಕೆ ಮೀಸಲಾಗಿದ್ದು, ಉಪ ಮೇಯರ್ ಹುದ್ದೆ ಸಾಮಾನ್ಯ ವರ್ಗದ ಮಹಿಳಾ ಅಭ್ಯರ್ಥಿಗೆ ಮೀಸಲಾಗಿದೆ. ವಿವಿಧ ಪಕ್ಷಗಳಲ್ಲಿ ಮೇಯರ್ ಮತ್ತು ಉಪ ಮೇಯರ್ ಹುದ್ದೆ ಆಕಾಂಕ್ಷಿಗಳು ಈಗಾಗಲೇ ಲಾಬಿ ಆರಂಭಿಸಿದ್ದಾರೆ.
ಕಾಂಗ್ರೆಸ್ ಮೇಯರ್ ಹುದ್ದೆಯನ್ನು ಪಡೆಯುವ ಕನಸು ಕಾಣುತ್ತಿದ್ದರೆ, ಅದರ ಮೈತ್ರಿ ಪಕ್ಷ ಜೆಡಿಎಸ್ ಹೊಂದಾಣಿಕೆಯಿಂದ ಹೊರಬರುವುದಾಗಿ ಹೇಳುತ್ತಿದೆ. ಮೈತ್ರಿ ಮುರಿದರೆ ಬೃಹತ್ ಏಕ ಪಕ್ಷವಾಗಿ ಬಿಜೆಪಿ ಮಂಡಳಿಯಲ್ಲಿ ಉಳಿಯಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com