ಎಸಿಬಿಯನ್ನು ಸಿಎಂ ಸಿದ್ದರಾಮಯ್ಯ ದುರ್ಬಳಕೆ ಮಾಡಿಕೊಂಡು ಯಡಿಯೂರಪ್ಪ ಅವರ ವಿರುದ್ಧ ಎಫ್ಐಆರ್ ದಾಖಲಿಸಿರುವ ಹಿನ್ನೆಲೆಯಲ್ಲಿ ಮಧ್ಯಪ್ರವೇಶ ಮಾಡಬೇಕೆಂದು ಬಿಜೆಪಿ ನಿಯೋಗ ರಾಜ್ಯಪಾಲರಿಗೆ ಮನವಿ ಮಾಡಿದೆ. ಡಿಕೆ ಶಿವಕುಮಾರ್ ಅವರ ನಿವಾಸದ ಮೇಲೆ ಐಟಿ ದಾಳಿ ನಡೆದಿದ್ದು ಯಡಿಯೂರಪ್ಪ ಡಿಕೆ ಶಿವಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿದ ಬೆನ್ನಲ್ಲೇ ಎಸಿಬಿಯನ್ನು ದುರ್ಬಳಕೆ ಮಾಡಿಕೊಂಡು ಯಡಿಯೂರಪ್ಪ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ರಾಜಕೀಯ ದ್ವೇಷದಿಂದ ಈ ರೀತಿ ಮಾಡಲಾಗಿದೆ ಎಂದು ಬಿಜೆಪಿ ಆರೋಪಿಸಿದೆ.