ಕರ್ನಾಟಕ: ಕೆಪಿಸಿಸಿಯಿಂದ 23 ಜಿಲ್ಲೆಗಳ ಕಾಂಗ್ರೆಸ್ ಉಸ್ತುವಾರಿ ಬದಲಾವಣೆ

ಪಕ್ಷವನ್ನು ಸ್ಥಳೀಯ ಮಟ್ಟದಲ್ಲಿ ಬಲಪಡಿಸಲು ಕ್ರಮ ಕೈಗೊಳ್ಳಲು ಮತ್ತು ಸಮಸ್ಯೆಗಳನ್ನು ಬಗೆಹರಿಸಲು...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು: ಪಕ್ಷವನ್ನು ಸ್ಥಳೀಯ ಮಟ್ಟದಲ್ಲಿ ಬಲಪಡಿಸಲು ಕ್ರಮ ಕೈಗೊಳ್ಳಲು ಮತ್ತು ಸಮಸ್ಯೆಗಳನ್ನು ಬಗೆಹರಿಸಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು ಜಿಲ್ಲಾ ನಾಯಕರ ಜೊತೆ ಸಲಹೆಗಳನ್ನು ಕೇಳಲು ಆರಂಭಿಸಿದ್ದಾರೆ.
ಕಾಂಗ್ರೆಸ್ ನ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರ ಸಲಹೆಯಂತೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಮತ್ತು ಕಾರ್ಯಾಧ್ಯಕ್ಷ ದಿನೇಶ್ ಗುಂಡುರಾವ್ ವಿಶೇಷ ಸಭೆಗಳನ್ನು ಜಿಲ್ಲೆಗಳಲ್ಲಿ ನಡೆಸಲು ಆರಂಭಿಸಿದ್ದಾರೆ.
ಹಾಸನ, ವಿಜಯಪುರ, ಬಳ್ಳಾರಿ ಮತ್ತು ಮಂಡ್ಯ ಜಿಲ್ಲೆಗಳಲ್ಲಿ  ವಿಶೇಷ ಸಭೆಗಳನ್ನು ನಡೆಸಿ ಎಲ್ಲಾ ನಾಲ್ಕು ಜಿಲ್ಲೆಗಳ ಅಧ್ಯಕ್ಷರನ್ನು ಬದಲಾಯಿಸಲು ನಿರ್ಧರಿಸಲಾಗಿದೆ. 23 ಜಿಲ್ಲೆಗಳ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಮುಂದಿನ ದಿನಗಳಲ್ಲಿ ಬದಲಾಗಲಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ಬಿ.ಶಿವರಾಮ್ ಅವರನ್ನು ನೇಮಕ ಮಾಡಿದ ದಿನದಿಂದ ವ್ಯಾಪಕ ಟೀಕೆಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅವರನ್ನು ಬದಲಾಯಿಸಲು ಯತ್ನಿಸಿದೆ. ಜಿಲ್ಲಾ ಸಮಿತಿಗಳಲ್ಲಿ ಕೇವಲ ಒಕ್ಕಲಿಗರಿಗೆ ಪ್ರಾಧ್ಯಾನ್ಯತೆ ನೀಡಲಾಗುತ್ತಿದೆ ಎಂದು ಶಿವರಾಮ್ ಮತ್ತು ಜಿಲ್ಲಾ ಉಸ್ತುವಾರಿ ಎ.ಮಂಜು ಅವರ ವಿರುದ್ಧ ಆರೋಪಗಳು ಕೇಳಿಬರುತ್ತಲೇ ಇವೆ.
ಪಕ್ಷದಲ್ಲಿ ಒಂದೇ ಹುದ್ದೆ ನಿಯಮವಿರುವ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸ್ಥಾನದ ಕಾಂಗ್ರೆಸ್ ಅಭ್ಯರ್ಥಿ ಸಿ.ಎಂ.ಇಬ್ರಾಹಿಂ ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಹುದ್ದೆಗೆ ರಾಜಿನಾಮೆ ನೀಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com