ನವದೆಹಲಿ: ಮುಂದಿನ ವರ್ಷ ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ಭರ್ಜರಿ ಸಿದ್ಧತೆ ನಡೆಸಿರುವ ಬಿಜೆಪಿ, ಕೇಂದ್ರದ ಇಬ್ಬರು ಸಚಿವರಿಗೆ ಕರ್ನಾಟಕ ವಿಧಾನಸಭೆ ಚುನಾವಣೆಯ ಉಸ್ತುವಾರಿ ನೀಡಲಾಗಿದೆ.
ರಾಜ್ಯ ಬಿಜೆಪಿ ಉಸ್ತುವಾರಿಯಾಗಿ ಪಿ.ಮುರಳಿಧರ್ ರಾವ್ ಅವರು ಮುಂದುವರೆದಿದ್ದು, ಕೇಂದ್ರ ಸಚಿವರಾದ ಪ್ರಕಾಶ್ ಜಾವಡೇಕರ್ ಅವರಿಗೆ ಚುನಾವಣಾ ಉಸ್ತುವಾರಿ ಹಾಗೂ ಪಿಯೂಷ್ ಘೋಯಲ್ ಅವರಿಗೆ ಸಹ ಚುನಾವಣಾ ಉಸ್ತುವಾರಿಯ ಹೊಣೆ ನೀಡಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಗುರುವಾರ ಆದೇಶ ಹೊರಡಿಸಿದ್ದಾರೆ.
ಇನ್ನು ಈ ವರ್ಷಾಂತ್ಯಕ್ಕೆ ನಡೆಯಲಿರುವ ಗುಜರಾತ್ ವಿಧಾನಸಭೆ ಚುನಾವಣೆಯ ಉಸ್ತುವಾರಿಯ ಹೊಣೆಯನ್ನು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರಿಗೆ ನೀಡಲಾಗಿದೆ.