ವಿಧಾನಪರಿಷತ್ ಸದಸ್ಯೆ ವಿಮಲಾಗೌಡ ಅವರ ಅಕಾಲಿಕ ನಿಧನದಿಂದ ತೆರವಾದ ಸ್ಥಾನಕ್ಕೆ ಆಗಸ್ಟ್ 31 ರಂದು ಚುನಾವಣೆ ನಿಗದಿಯಾಗಿತ್ತು. ವಿಧಾನಪರಿಷತ್‌ನ ಒಂದು ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಎಂ. ಇಬ್ರಾಹಿಂ ಅವರು ಮಂಗಳವಾರ ನಾಮ ಪತ್ರ ಸಲ್ಲಿಸಿದ್ದರು. ಅವರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ವಿಧಾನಸಭೆಯ ಉಪಾಧ್ಯಕ್ಷ ಶಿವಶಂಕರರೆಡ್ಡಿ, ರಾಮಲಿಂಗರೆಡ್ಡಿ ಸೇರಿದಂತೆ ಹತ್ತು ಮಂದಿ ಸೂಚಕರಾಗಿ ಸಹಿ ಹಾಕಿದ್ದರು.