ಬೆಂಗಳೂರು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರ ಪರಮಾಪ್ತರಾಗಿದ್ದ ಕಾಂಗ್ರೆಸ್ ಮುಖಂಡ ವರಪ್ರಸಾದ್ ರೆಡ್ಡಿ ಅವರು ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಇತ್ತೀಚೆಗೆ ಸಚಿವ ಡಿ.ಕೆ ಶಿವಕುಮಾರ್ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ ಹಿನ್ನೆಲೆಯಲ್ಲಿ ರೆಡ್ಡಿ ಬಿಜೆಪಿ ಸೇರಿದ್ದಾರೆ ಎಂದು ಹೇಳಲಾಗಿದೆ. ಆದರೆ ಈ ಆರೋಪವನ್ನು ವರಪ್ರಸಾದ್ ರೆಡ್ಡಿ ನಿರಾಕರಿಸಿದ್ದಾರೆ.
ಇನ್ನೂ ಜೆಡಿಎಸ್ ಹಾಗೂ ಕಾಂಗ್ರೆಸ್ ನ ಹಲವು ಮುಖಂಡರು ಶೀಘ್ರವೇ ಬಿಜೆಪಿ ಸೇರಲಿದ್ದಾರೆ ಎಂದು ಯಡಿಯೂರಪ್ಪ ಹೇಳಿದ್ದಾರೆ.