ಚುನಾವಣೆ ಮುಗಿಯುವವರೆಗೂ ವಿರಮಿಸದಿರಿ: ಕ್ಷೇತ್ರಾದ್ಯಂತ ಸಂಚರಿಸಲು ವೇಣುಗೋಪಾಲ್ ಸೂಚನೆ

ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಬೆಂಗಳೂರಿಗೆ ಆಗಮಿಸಿದ್ದು, ಬುಧುವಾರ ವಿವಿಧ ಸಮಿತಿಗಳ ...
ವೇಣು ಗೋಪಾಲ್
ವೇಣು ಗೋಪಾಲ್
ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್  ಬೆಂಗಳೂರಿಗೆ ಆಗಮಿಸಿದ್ದು, ಬುಧುವಾರ ವಿವಿಧ ಸಮಿತಿಗಳ ಸಭೆ ನಡೆಸಿದ್ದಾರೆ. ಜೊತೆಗೆ ಸಿಎಂ ಮತ್ತು ಸಚಿವರುಗಳ ಜೊತೆ ಪ್ರತ್ಯೇಕ ಸಭೆ ನಡೆಸಿದ್ದಾರೆ.
ಮುಂಬರುವ ವಿಧಾನಸಭಾ ಚುನಾವಣೆಗೆ ಕಾರ್ಯತಂತ್ರ ರೂಪಿಸುವ ಉದ್ದೇಶದಿಂದ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಪಕ್ಷದ ಹಿಂದುಳಿದ, ಅಲ್ಪಸಂಖ್ಯಾತ ಮತ್ತು ಪರಿಶಿಷ್ಟ ವರ್ಗದ ಘಟಕಗಳ ಜಿಲ್ಲಾ ಮಟ್ಟದ ಪದಾಧಿಕಾರಿಗಳ ಸಭೆ ನಡೆಸಿದರು. ಗುರುವಾರ ಕೂಡ ಸಚಿವರುಗಳ ಜೊತೆ ಸಭೆ ನಡೆಸಲಿದ್ದಾರೆ.
ಮನೆಯಲ್ಲಿ, ಕಚೇರಿ‌ಯಲ್ಲಿ ಕುಳಿತು ಸಮಯ ಕಳೆಯಬೇಡಿ. ಮುಂದಿನ ಆರು ತಿಂಗಳ ಕಾಲ ಕ್ಷೇತ್ರದಾದ್ಯಂತ ಸುತ್ತಾಡಿ ಪಕ್ಷವನ್ನು ಚುನಾವಣೆಗೆ ಸಜ್ಜುಗೊಳಿಸಿ ಎಂದು ಕಾರ್ಯಕರ್ತರಿಗೆ ಸೂಚಿಸಿದ್ದಾರೆ.
ಡಿಸೆಂಬರ್ ನಲ್ಲಿ ಬೃಹತ್ ರ್ಯಾಲಿ ಆಯೋಜಿಸಲಿದ್ದು, ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ರ್ಯಾಲಿ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಎಂದು ಹೇಳಿದ್ದಾರೆ.
ಇತ್ತೀಚೆಗೆ ಕಾಂಗ್ರೆಸ್ ಸೇರಿದ ಎಂ.ಡಿ ಲಕ್ಷ್ಮಿ ನಾರಾಯಣ ಹಿಂದುಳಿದ ವರ್ಗಗಳ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು. ವೇಣುಗೋಪಾಲ್ ಇಂದು ಖಾಸಗಿ ಹೋಟೆಲ್ ನಲ್ಲಿ ಸಚಿವರುಗಳ ಜೊತೆ ಸಭೆ ನಡೆಸಲಿದ್ದಾರೆ. 
ಇನ್ನೂ  ಸಂಪುಟ ವಿಸ್ತರಣೆ ಸಂಬಂಧ ಸೆಪ್ಟಂಬರ್  1 ರಂದು  ಹೊಸ ಸಚಿವರುಗಳ ಹೆಸರು ಘೋಷಿಸಿುವ ಸಾಧ್ಯತೆಯಿದೆ, ಮತ್ತೆ ಸಂಪುಟ ವಿಸ್ತರಣೆ ಮುಂದೂಡಲಾಗುವುದು ಎಂಬ ಮಾತುಗಳು ಕೇಳಿ ಬರುತ್ತಿವೆ, ಶುಕ್ರವಾರ ನೂತನ ಸಚಿವರುಗಳ ಹೆಸರನ್ನು ಪ್ರಕಟಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com