ಬೆಂಗಳೂರು: ಅಂತೂ ಇಂತೂ ಸಿದ್ದರಾಮಯ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ಥ ಫಿಕ್ಸ್ ಆಗಿದೆ. ನಾಳೆ ಸಂಜೆ 5 ಗಂಟೆಗೆ ರಾಜ ಭವನದಲ್ಲಿ ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ.
ವಿಧಾನ ಪರಿಷತ್ ಸದಸ್ಯ ಎಚ್. ಎಂ ರೇವಣ್ಣ, ಆರ್. ಬಿ ತಿಮ್ಮಾಪುರ, ಮತ್ತು ಗೀತಾ ಮಹಾದೇವ ಪ್ರಸಾದ್ ನಾಳೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಸಂಪುಟ ವಿಸ್ತರಣೆಗೆ ಹಲವರ ಹೆಸರು ಕೇಳಿ ಬಂದಿದ್ದವು. ಕೊನೆ ಕ್ಷಣದಲ್ಲಿ ಮಾಜಿ ಸಚಿವ ದಿವಂಗತ ಮಹಾದೇವ ಪ್ರಸಾದ್ ಅವರ ಪತ್ನಿ ಗೀತಾ ಅವರಿಗೆ ಅವಕಾಶ ನೀಡಲಾಗಿದೆ.
ರಾಜ್ಯಪಾಲರಾದ ವಜುಭಾಯಿ ವಾಲಾನೂತನ ಸಚಿವರಿಗೆ ಪ್ರಮಾಣವಚನ ಬೋಧಿಸಲಿದ್ದಾರೆ. ಮಹದೇವಪ್ಪ ನಿಧನದಿಂದ ಒಂದು ಸ್ಥಾನ ತೆರವಾಗಿದ್ದರೆ, ಎಚ್.ವೈ.ಮೇಟಿ ಮತ್ತು ಡಾ.ಜಿ.ಪರಮೇಶ್ವರ ಅವರ ರಾಜೀನಾಮೆಯಿಂದ ಎರಡು ಸ್ಥಾನಗಳು ತೆರವಾಗಿದ್ದವು.