ಜೆಡಿಎಸ್‌ ಅಧಿಕಾರಕ್ಕೆ ಬಂದರೆ ಎಸ್ಸಿ ಸಮುದಾಯಕ್ಕೆ ಉಪ ಮುಖ್ಯಮಂತ್ರಿ ಸ್ಥಾನ: ಎಚ್‌ಡಿಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದಲಿತರ ಬಗ್ಗೆ ಕಾಳಜಿ, ತಮ್ಮ ಪಕ್ಷದ ದಲಿತ ಅಭ್ಯರ್ಥಿಗಳನ್ನು ತಾವೇ ಸೋಲಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ....
ಎಚ್ ಡಿ ಕುಮಾರಸ್ವಾಮಿ
ಎಚ್ ಡಿ ಕುಮಾರಸ್ವಾಮಿ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದಲಿತರ ಬಗ್ಗೆ ಕಾಳಜಿ, ತಮ್ಮ ಪಕ್ಷದ ದಲಿತ ಅಭ್ಯರ್ಥಿಗಳನ್ನು ತಾವೇ ಸೋಲಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಇದು ಬಹಿರಂಗವಾಗಲಿದೆ ಎಂದು ಸಿಎಂ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಜೆಡಿಎಸ್ ರಾಜ್ಯಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ಅಧಿಕಾರಕ್ಕೆ ಬಂದರೆ ಎಸ್ಸಿ ಸಮುದಾಯದವರನ್ನು ಉಪ ಮುಖ್ಯಮಂತ್ರಿ ಮಾಡುವುದಾಗಿ ಘೋಷಿಸಿದ್ದಾರೆ.
ಸಿದ್ದರಾಮಯ್ಯ ತಾವೇ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಂಬಿಸಿಕೊಳ್ಳುವ ಮೂಲಕ ದಲಿತ ನಾಯಕರಾದ ಜಿ ಪರಮೇಶ್ವರ ಹಾಗೂ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಕಡೆಗಣಿಸಿದ್ದಾರೆ. ಅವರಿಗೆ ದಲಿತರ ಬಗ್ಗೆ ಯಾವುದೇ ಬದ್ದತೆ ಇಲ್ಲ ಮತ್ತು ಅವರ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. 
ಜೆಡಿಎಸ್ ಅಧಿಕಾರಕ್ಕೆ ಬಂದರೆ ದಲಿತರಿಗೆ ಡಿಸಿಎಂ ಸ್ಥಾನ ನೀಡಲಾಗುವುದು ಎಂದು ನಾವು ಈಗಾಗಲೇ ಘೋಷಿಸಿದ್ದೇವೆ. ಕಾಂಗ್ರೆಸ್‌ ಹಾಗೂ ಬಿಜೆಪಿಗೆ ತಾಕತ್ತಿದ್ದರೆ ಈ ರೀತಿ ಘೋಷಣೆ ಮಾಡಲಿ ಎಂದು ಎಚ್ ಡಿಕೆ ಸವಾಲೆಸೆದಿದ್ದಾರೆ.
ಮತದಾರರು ಕಾಂಗ್ರೆಸ್‌ ಹಾಗೂ ಬಿಜೆಪಿಗೆ ಮತ ನೀಡಿ ನಿಮ್ಮ ವೋಟು ವ್ಯರ್ಥ ಮಾಡಿಕೊಳ್ಳಬೇಡಿ. ಆ ಎರಡೂ ಪಕ್ಷ ಗಳಿಗೆ ಬಡಜನರ ಅಭಿವೃದ್ಧಿ ಬೇಕಾಗಿಲ್ಲ. ಬಡವರ ರಕ್ತ ಕುಡಿದು ಅಧಿಕಾರದ ಸಾಮ್ರಾಜ್ಯ ನಿರ್ಮಿಸಲು ಹೊರಟಿರುವ ಎರಡೂ ಪಕ್ಷ ಗಳಿಗೆ ಮುಂದಿನ ದಿನಗಳಲ್ಲಿ ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com