ರಾಜ್ಯಕ್ಕೆ ಅಮಿತ್ ಶಾ ಪ್ರವೇಶ ನಿಷೇಧಿಸುವ ಪ್ರಸ್ತಾವ ಇಲ್ಲ: ರಾಮಲಿಂಗಾ ರೆಡ್ಡಿ

ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ರಾಜ್ಯಕ್ಕೆ ಬಾರದಂತೆ ನಿರ್ಬಂಧ ವಿಧಿಸುವ ಯಾವುದೇ ಪ್ರಸ್ತಾವ ಸರ್ಕಾರದ ಮುಂದೆ ಇಲ್ಲ ಎಂದು....
ರಾಮಲಿಂಗಾ ರೆಡ್ಡಿ
ರಾಮಲಿಂಗಾ ರೆಡ್ಡಿ
Updated on: 
ಬೆಳಗಾವಿ: ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ರಾಜ್ಯಕ್ಕೆ ಬಾರದಂತೆ ನಿರ್ಬಂಧ ವಿಧಿಸುವ ಯಾವುದೇ ಪ್ರಸ್ತಾವ ಸರ್ಕಾರದ ಮುಂದೆ ಇಲ್ಲ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರು ಬುಧವಾರ ಸ್ಪಷ್ಟಪಡಿಸಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಮಲಿಂಗಾ ರೆಡ್ಡಿ, ಅಮಿತ್ ಶಾ ಅವರು ತಾವು ಮಾಡುವ ಭಾಷಣದ ಬಗ್ಗೆ ಎಚ್ಚರಿಕೆ ವಹಿಸಬೇಕು. ಏಕೆಂದರೆ, ‘ಅಮಿತ್ ಶಾ ಹೇಳಿದಂತೆ ನಾವು ಕೇಳುತ್ತಿದ್ದೇವೆ’ ಎಂದು ಹುಣಸೂರಿನಲ್ಲಿ ಗಲಾಟೆಗೆ ಕಾರಣವಾದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಅದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಕೂಡ ಆಗಿದೆ. ಹೀಗಾಗಿ ಒಂದು ರಾಷ್ಟ್ರೀಯ ಪಕ್ಷದ ಅಧ್ಯಕ್ಷರಾದ ಅಮಿತ್ ಶಾ ಅವರು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಗಲಾಟೆ ನಡೆಸಲು ಪ್ರಚೋದನೆ ನೀಡಬಾರದು ಎಂದು ಹೇಳಿದ್ದಾರೆ.
ಇದೇ ವೇಳೆ ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧವೂ ವಾಗ್ದಾಳಿ ನಡೆಸಿದ ಗೃಹ ಸಚಿವರು, ಪ್ರತಾಪ್ ಸಿಂಹ ಮೊದಲು ತಮ್ಮ ನಡವಳಿಕೆ ಸರಿಮಾಡಿಕೊಳ್ಳಬೇಕು. ಹುಣಸೂರಿನಲ್ಲಿ ಅನವಶ್ಯಕವಾಗಿ ಗಲಾಟೆಗೆ ಅವರು ಕಾರಣರಾಗಿದ್ದಾರೆ. ಒಬ್ಬ ಸಂಸದರಾಗಿ ಅವರು ಹೀಗೆ ಮಾಡಬಾರದಿತ್ತು. ಮತಬ್ಯಾಂಕ್ ಗಟ್ಟಿ ಮಾಡಿಕೊಳ್ಳಲು ಶಾಂತಿಗೆ ಭಂಗ ತರುವುದು ಸರಿಯಲ್ಲ ಎಂದರು.
ಅಧಿಕಾರಿಗಳು ಸರ್ಕಾರದ ಅಣತಿಯಂತೆ ನಡೆದುಕೊಳ್ಳುತ್ತಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ರಾಮಲಿಂಗಾ ರೆಡ್ಡಿ, ಬಿಜೆಪಿಯವರು ಹೇಳಿದಂತೆ ಅಧಿಕಾರಿಗಳು ಕುಣಿಯುವುದಕ್ಕೆ ಆಗುತ್ತದೆಯೇ? ಅಲ್ಲಿನ ಎಸ್‌ಪಿ ಕಾನೂನಿನಂತೆ ಕಾರ್ಯನಿರ್ವಹಿಸಿದ್ದಾರೆ. ಸಂಸದರು ಇಲ್ಲಸಲ್ಲದ ಆರೋಪ ಮಾಡಬಾರದು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com