ರಾಹುಲ್ ಗಾಂಧಿ ಅಯಸ್ಕಾಂತದಂತೆ ಇತರೆ ಪಕ್ಷಗಳನ್ನು ಸೆಳೆಯುತ್ತಾರೆ: ವೀರಪ್ಪ ಮೊಯ್ಲಿ

ಕಾಂಗ್ರೆಸ್ ಅಧ್ಯಕ್ಷರಾಗಿ ಬಡ್ತಿ ಪಡೆಯುತ್ತಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಬಿಜೆಪಿ ವಿರುದ್ಧ ಜಂಟಿ ಹೋರಾಟ....
ವೀರಪ್ಪ ಮೊಯ್ಲಿ
ವೀರಪ್ಪ ಮೊಯ್ಲಿ
ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷರಾಗಿ ಬಡ್ತಿ ಪಡೆಯುತ್ತಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಬಿಜೆಪಿ ವಿರುದ್ಧ ಜಂಟಿ ಹೋರಾಟ ನಡೆಸುವುದಕ್ಕಾಗಿ ಇತರೆ ಸಮಾನಮನಸ್ಕ ಪಕ್ಷಗಳನ್ನು ಒಟ್ಟಿಗೆ ಸೇರಿಸುವ ಸಾಮಾರ್ಥ್ಯ ಇದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಎಂ ವೀರಪ್ಪ ಮೊಯ್ಲಿ ಅವರು ಹೇಳಿದ್ದಾರೆ.
ರಾಹುಲ್ ಗಾಂಧಿ ಅವರಲ್ಲಿ ಅವರ ಮುತ್ತಾತ ಜವಾಹರ್ ಲಾಲ್ ನೆಹರು ಹಾಗೂ ಅವರ ಅಜ್ಜಿ ಇಂದಿರಾ ಗಾಂಧಿ ಅವರ ಕೆಲವು ಗುಣಗಳಿವೆ ಎಂದು ಮೋಯ್ಲಿ ಹೇಳಿದ್ದಾರೆ.
ಇದೇ ವೇಳೆ ಕಾಂಗ್ರೆಸ್ ಕುಟುಂಬ ರಾಜಕೀಯ ಮಾಡುತ್ತಿದೆ ಎಂಬ ಬಿಜೆಪಿ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿದ ವೀರಪ್ಪ ಮೊಹ್ಲಿ ಅವರು, ಒಂದು ವೇಳೆ ರಾಹುಲ್ ಗಾಂಧಿ ಅವರು ಪ್ರಧಾನಿಯಾಗಲು ಬಯಸಿದ್ದರೆ 2004-2014ರ ಅವಧಿಯಲ್ಲೇ ಆಗುತ್ತಿದ್ದರು ಎಂದಿದ್ದಾರೆ.
ರಾಹುಲ್ ಗಾಂಧಿ ಅವರಿಗೆ ವಿನಯತೆ ಇದೆ. ಹೀಗಾಗಿ ಅವರು ಖಂಡಿತವಾಗಿಯೂ ಇತರೆ ಪಕ್ಷಗಳು ಅವರಿಗೆ ಸಹಕಾರ ನೀಡುತ್ತವೆ ಮತ್ತು ಅವರಿಗೆ ಇತರೆ ಪಕ್ಷಗಳನ್ನು ಆಯಸ್ಕಾಂತದಂತೆ ಸೆಳೆಯುವ ಶಕ್ತಿ ಇದೆ ಮಾಜಿ ಮುಖ್ಯಮಂತ್ರಿ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com