ಬೀದರ್: ರಾಜ್ಯ ಕಾಂಗ್ರೆಸ್ ಸರ್ಕಾರ ಜನಹಿತ ಮರೆತಿದೆ, ಅಭಿವೃದ್ಧಿ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಸಂಪೂರ್ಣ ವಿಫಲವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಆರೋಪಿಸಿದ್ದಾರೆ.
ಬೀದರ್‍ನಲ್ಲಿ ನಿನ್ನೆ ಪರಿವರ್ತನಾ ಯಾತ್ರೆಯ ಮುನ್ನ ಸುದ್ದಿಗೋಷ್ಠಿ ನಡೆಸಿದ ಅವರು, ರಾಷ್ಟ್ರೀಯ ಅಪರಾಧ ವಿಭಾಗದ ವರದಿಯಂತೆ ಬೆಂಗಳೂರು, ಅಪರಾಧಗಳಲ್ಲಿ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ ಎಂದು ದೂರಿದರು.
ನಂತರ ನಡೆದ ಸಾರ್ವಜನಿಕ ಸಭೆಯಲ್ಲಿ ಯಡಿಯೂರಪ್ಪ, ಕಾಂಗ್ರೆಸ್ ಸರ್ಕಾರವನ್ನು ಮತ್ತೊಮ್ಮೆ ತರಾಟೆಗೆ ತೆಗೆದುಕೊಂಡರು. ಅಭಿವೃದ್ಧಿಗಾಗಿ, ಪರಿವರ್ತನೆಗಾಗಿ ಕರ್ನಾಟಕವನ್ನು ಮಾದರಿ ರಾಜ್ಯವನ್ನಾಗಿ ಮಾಡಲು ಬಿಜೆಪಿಯನ್ನು ಬೆಂಬಲಿಸುವಂತೆ ಜನರಲ್ಲಿ ಮನವಿ ಮಾಡಿಕೊಂಡರು.