ಕಾಂಗ್ರೆಸ್ ಗೆ ಅಭ್ಯರ್ಥಿಗಳನ್ನು ಘೋಷಿಸುವ ಆತುರ ಇಲ್ಲ: ಸಿಎಂ ಸಿದ್ದರಾಮಯ್ಯ

ಮುಂಬರುವ ವಿಧಾನಸಭೆ ಚುನಾವಣೆಗೆ ಮಾರ್ಚ್ ಹೊತ್ತಿಗಷ್ಟೆ ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ....
ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ
Updated on: 
ಬಸವಕಲ್ಯಾಣ:ಮುಂಬರುವ ವಿಧಾನಸಭೆ ಚುನಾವಣೆಗೆ ಮಾರ್ಚ್ ಹೊತ್ತಿಗಷ್ಟೆ ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಘೋಷಣೆ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದೊಳಗಿನ ಸಮೀಕ್ಷೆ ಮತ್ತು ಬೇರೆ ವರದಿಗಳು ಬಂದ ನಂತರ ಪ್ರತಿ ಕ್ಷೇತ್ರಗಳ ಈಗಿರುವ ಶಾಸಕರ ಸಾಮರ್ಥ್ಯ ಮತ್ತು ದೌರ್ಬಲ್ಯಗಳನ್ನು ಅರಿತುಕೊಂಡ ನಂತರವಷ್ಟೇ ಅಭ್ಯರ್ಥಿಗಳನ್ನು ಮುಂದಿನ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗುವುದು ಎಂದು ಹೇಳಿದರು.
ಮುಂಬರುವ ವಿಧಾನಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕಾಂಗ್ರೆಸ್ ಕಾರ್ಯತಂತ್ರ ರೂಪಿಸಿ ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ. ಈ ವರ್ಷದ ಆರಂಭದಲ್ಲಿ 171 ಮಂದಿಯನ್ನು ಪಕ್ಷದ ಪದಾಧಿಕಾರಿಗಳನ್ನಾಗಿ ನೇಮಿಸಿ ರಾಜ್ಯ ಕಾಂಗ್ರೆಸ್ ಸಮಿತಿಯನ್ನು ಪುನರ್ ಸಂಘಟನೆಗೊಳಿಸಲಾಗಿತ್ತು. ಅವರಲ್ಲಿ 33 ಮಂದಿ ಮಹಿಳೆಯರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com