ರಾಷ್ಟ್ರೀಯ ತನಿಖಾ ಸಂಸ್ಥೆ ಪರೇಶ್ ಮೆಸ್ತಾ ಸಾವಿನ ತನಿಖೆ ನಡೆಸಲಿ: ಅನಂತ್ ಕುಮಾರ್ ಒತ್ತಾಯ

ಉತ್ತರ ಕನ್ನಡ ಜಿಲ್ಲೆಯಲ್ಲಿ ಪರೇಶ್ ಮೆಸ್ತಾ ಶಂಕಾಸ್ಪದ ಸಾವಿನ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಇನ್ನೂ ಹಸ್ತಾಂತರಿಸಿಲ್ಲ ...
ಕೇಂದ್ರ ಸಚಿವ ಅನಂತ್ ಕುಮಾರ್
ಕೇಂದ್ರ ಸಚಿವ ಅನಂತ್ ಕುಮಾರ್
ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯಲ್ಲಿ ಪರೇಶ್ ಮೆಸ್ತಾ ಶಂಕಾಸ್ಪದ ಸಾವಿನ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಇನ್ನೂ ಹಸ್ತಾಂತರಿಸಿಲ್ಲ ಎಂದು ಆರೋಪಿಸಿದ ಕೇಂದ್ರ ಸಚಿವ ಅನಂತ್ ಕುಮಾರ್, ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.
ಪರೇಶೆ ಮೆಸ್ತಾ ಸಾವಿನ ತನಿಖೆಯನ್ನು ಸಿಬಿಐಗೆ ವಹಿಸಲಾಗಿದೆ ಎಂದು ಹೇಳಿ ರಾಜ್ಯ ಸರ್ಕಾರ ನಾಟಕವಾಡುತ್ತಿದೆ. ಈ ಸಂಬಂಧ ಸರ್ಕಾರ ಯಾವುದೇ ಅಧಿಸೂಚನೆ ಹೊರಡಿಸಿಲ್ಲ. ಆದುದರಿಂದ ರಾಷ್ಟ್ರೀಯ ತನಿಖೆ ನಡೆಸುವಂತೆ ನಾನು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಒತ್ತಾಯಿಸುತ್ತೇನೆ ಎಂದು ಹೇಳಿದರು.
ಪರೇಶ್ ಮೆಸ್ತಾನ ಸಂಶಯಾಸ್ಪದ ಸಾವಿನ ಪ್ರಕರಣ ಇತ್ತೀಚೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಕೋಮು ಹಿಂಸಾಚಾರಕ್ಕೆ ಕಾರಣವಾಗಿ ಪೊಲೀಸರು ನಿಷೇಧಾಜ್ಞೆ ಆದೇಶ ಜಾರಿಗೊಳಿಸಬೇಕಾಯಿತು. 
ಇದೇ ವೇಳೆ ಮಾತನಾಡಿದ ಅನಂತ್ ಕುಮಾರ್ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 28 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 25 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದು ರಾಜ್ಯದ 225 ವಿಧಾನಸಭಾ ಕ್ಷೇತ್ರಗಳ ಪೈಕಿ 150ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದೇ ವೇಳೆ ಮಾತನಾಡಿದ ಕೇಂದ್ರ ಸಚಿವ ಸದಾನಂದ ಗೌಡ, ಕೆ.ಆರ್.ಪುರಂ ಶಾಸಕ ಬಿ.ಎ.ಬಸವರಾಜ್ ಅವರ ಆಡಳಿತಾವಧಿಯಲ್ಲಿ 81 ಕೊಲೆ ಪ್ರಕರಣಗಳಾಗಿವೆ. ರಿಯಲ್ ಎಸ್ಟೇಟ್ ಮಾಫಿಯಾ ದಂಗೆಯ ಕಿಂಗ್ ಪಿನ್ ಬಸವರಾಜ್ ಅವರೇ ಎಂದು ಪರೋಕ್ಷವಾಗಿ ಹೇಳಿದರು. 
ಪರಿವರ್ತನಾ ಯಾತ್ರೆಯನ್ನುದ್ದೇಶಿಸಿ ಮಾತನಾಡಿದ ಅವರು, ಬಸವರಾಜ್ ಅವರು ಶಾಸಕರಾದ ಮೇಲೆ ಕೆ.ಆರ್.ಪುರಂ ಕ್ಷೇತ್ರದಲ್ಲಿ ಪರಿಸ್ಥಿತಿ ಹದಗೆಟ್ಟಿದ್ದು ಮೂಲಭೂತ ಸೌಕರ್ಯಗಳಿಂದ ನಲುಗುಹೋಗುತ್ತಿದೆ ಎಂದು ಆರೋಪಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com