ನಿನ್ನೆ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಕಚೇರಿಯಲ್ಲಿ ಸ್ಥಳೀಯ ನಾಯಕರ ಸಭೆ ನಡೆಸಿದರು. ಸಭೆಯಲ್ಲಿ ಇದೇ 21ರಿಂದ ಕರ್ನಾಟಕದಲ್ಲಿ ಚುನಾವಣಾ ಪ್ರಚಾರ ಆರಂಭಿಸುವ ವಿಧಾನಗಳ ಕುರಿತು ಚರ್ಚೆ ನಡೆಸಲಾಯಿತು. ಗುಜರಾತ್ ಮತ್ತು ಹಿಮಾಚಲ ಪ್ರದೇಶಗಳಲ್ಲಿ ಪಕ್ಷದ ಸೋಲಿನ ಬಗ್ಗೆ ಪ್ರತಿಕ್ರಿಯಿಸಿದ ಶಿವಕುಮಾರ್, ಸೂರತ್, ಅಹ್ಮದಾಬಾದ್ ಗಳಲ್ಲಿ ಉದ್ಯಮಿಗಳು ಮತ್ತು ವ್ಯಾಪಾರಸ್ಥರ ಮೇಲೆ ಬೆದರಿಕೆ, ಒತ್ತಡ ಹಾಕಿ ಬಿಜೆಪಿ ಅಧಿಕಾರ ದುರುಪಯೋಗಪಡಿಸಿಕೊಂಡು ಗೆದ್ದರೂ ಸಹ ಕಾಂಗ್ರೆಸ್ ಉತ್ತಮ ಫಲಿತಾಂಶವನ್ನು ಕಂಡಿದೆ. ಈ ಬಾರಿ ಗುಜರಾತ್ ನಲ್ಲಿ ಕಾಂಗ್ರೆಸ್ ಹೆಚ್ಚಿನ ಸೀಟುಗಳನ್ನು ಗೆದ್ದುಕೊಂಡಿದೆ ಎಂದು ಸಂತೋಷ ವ್ಯಕ್ತಪಡಿಸಿದರು.