ಬಿಜೆಪಿ ಗೆದ್ದ ಸೀಟುಗಳ ಸಂಖ್ಯೆ ಕಡಿಮೆಯಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಒಂದು ಪಕ್ಷ ಅನೇಕ ವರ್ಷಗಳಿಂದ ಅಧಿಕಾರದಲ್ಲಿರುವಾಗ ಇಂತಹ ವಾತಾವರಣ ಕಂಡುಬರುವುದು ಸಹಜ ಎಂದರು. ವಿದ್ಯುನ್ಮಾನ ಮತ ಯಂತ್ರದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಕ್ತಪಡಿಸಿದ ಸಂಶಯದ ಬಗ್ಗೆ ಮಾತನಾಡಿದ ಅವರು, ಮುಖ್ಯಮಂತ್ರಿಯವರ ಹೇಳಿಕೆ ಬಾಲಿಶವಾದುದು. ಸಿದ್ದರಾಮಯ್ಯನವರಿಗೆ ವಿದ್ಯುನ್ಮಾನ ಮತಯಂತ್ರಗಳ ಬಗ್ಗೆ ಗೊತ್ತಿದೆ ಎಂದರು.