ಅಖಿಲ ಭಾರತ ಕಾಂಗ್ರೆಸ್ ಸಮಿತಿಗೆ ಮುಖ್ಯಮಂತ್ರಿಗಳು ಪರೋಕ್ಷವಾಗಿ ಹಣಕಾಸಿನ ನೆರವು ನೀಡುತ್ತಿದ್ದಾರೆ. ಕರ್ನಾಟಕದಲ್ಲಿ ಇಂದು ಕಾನೂನು, ಸುವ್ಯವಸ್ಥೆ ತೀರಾ ಹದಗೆಟ್ಟಿದ್ದು 20ಕ್ಕೂ ಹೆಚ್ಚು ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಲಾಗಿದೆ. ಆದರೆ ಆರೋಪಿಗಳನ್ನು ಹಿಡಿಯುವಲ್ಲಿ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಕರ್ನಾಟಕದ ಬೆಳವಣಿಗೆಗೆ ಪ್ರಧಾನಿ ಹೆಚ್ಚಿನ ಹಣವನ್ನು ಬಿಡುಗಡೆ ಮಾಡುತ್ತಿದ್ದಾರೆ. ಆದರೆ ಸರ್ಕಾರ ಅದನ್ನು ಸರಿಯಾಗಿ ಬಳಕೆ ಮಾಡಿಕೊಳ್ಳುತ್ತಿಲ್ಲ ಎಂದು ಆರೋಪಿಸಿದರು.