ಆರೋಪ ಸಾಬೀತು ಪಡಿಸಲಿ, ಇಲ್ಲವೇ ರಾಜಕೀಯ ನಿವೃತ್ತಿಯಾಗಲಿ: ಸಿದ್ದರಾಮಯ್ಯ

ಮುಖ್ಯಮಂತ್ರಿ ಕುರ್ಚಿಗಾಗಿ ಸಿಎಂ ಸಿದ್ದರಾಮಯ್ಯ ಹೈಮಾಂಡ್ ಗೆ 1000 ಕೋಟಿ ನೀಡಿದ್ದಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರ ಆರೋಪಕ್ಕೆ ...
ಸಿದ್ದರಾಮಯ್ಯ ಮತ್ತು ಯಡಿಯೂರಪ್ಪ
ಸಿದ್ದರಾಮಯ್ಯ ಮತ್ತು ಯಡಿಯೂರಪ್ಪ

ಬೆಂಗಳೂರು: ಮುಖ್ಯಮಂತ್ರಿ ಕುರ್ಚಿಗಾಗಿ ಸಿಎಂ ಸಿದ್ದರಾಮಯ್ಯ ಹೈಮಾಂಡ್ ಗೆ 1000 ಕೋಟಿ ನೀಡಿದ್ದಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ತಮ್ಮ ವಿರುದ್ಧದ ಆರೋಪ ತಳ್ಳಿ ಹಾಕಿರುವ ಸಿಎಂ ಸಿದ್ದರಾಮಯ್ಯ, ಇದು ಯಡಿಯೂರಪ್ಪ ಅವರ ಬೇಜವಬ್ಜಾರಿತನವನ್ನು ತೋರಿಸುತ್ತದೆ. ಯಡಿಯೂರಪ ಅವರ ಬಳಿ ದಾಖಲೆ ಇದ್ದರೇ ಆರೋಪ ಸಾಬೀತು ಪಡಿಸಲಿ ಇಲ್ಲವೇ ರಾಜಕೀಯನಿವೃತ್ತಿ ಪಡೆಯಲಿ ಎಂದು ಆಗ್ರಹಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಯಡಿಯೂರಪ್ಪ ಆಧಾರ ನಿರಾಧಾರವಾದದ್ದು, ಅಧಿಕಾರವಿಲ್ಲ ಎಂಬ ಹತಾಶೆಯಿಂದ ಇಂಥ ಹೇಳಿಕೆ ನೀಡುತ್ತಿದ್ದಾರೆ ಎಂದು ದೂರಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕುರ್ಚಿ ಉಳಿಸಿಕೊಳ್ಳಲು ಅವರ ಆಪ್ತರೂ ಆಗಿರುವ ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ಅವರ ಮೂಲಕ ಕಾಂಗ್ರೆಸ್‌ನ ದೆಹಲಿಯ ಕೆಲವು ನಾಯಕರಿಗೆ ರು 1 ಸಾವಿರ ಕೋಟಿ ಸಂದಾಯ ಮಾಡಿದ್ದಾರೆ ಎಂದು ನಿನ್ನೆ ಆರೋಪಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ವಿಭಾಗದಲ್ಲಿ ಸಣ್ಣ ನೀರಾವರಿ ಇಲಾಖೆ ಕಾಮಗಾರಿ ಮಾಡದೇ 43 ಕೋಟಿ ಹಣ ಗುಳುಂ ಮಾಡಿದ್ದಾರೆ.  ಆರೋಪ ಸಾಬೀತಾದ್ರೂ ಸಿಎಂ ಹಣ ವಸೂಲಿ ಮಾಡಲಾರದೇ ಕಣ್ಮುಚ್ಚಿ ಕುಳಿತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com