ಸರ್ಕಾರಕ ವರ್ಚಸ್ಸಿಗೆ ಧಕ್ಕೆ ತರಲು ಕೇವಲ ಕಾಂಗ್ರೆಸ್ ನಾಯಕರ ಮನೆ ಮೇಲೆ ಇಡಿ ದಾಳಿ: ಸಿದ್ದರಾಮಯ್ಯ

ಸರ್ಕಾರದ ಗೌರವಕ್ಕೆ ಧಕ್ಕೆ ತರುವ ಸಲುವಾಗಿ ಕೇಂದ್ರ ಬಿಜೆಪಿ ಸರ್ಕಾರ ಜಾರಿ ನಿರ್ದೇಶನಾಲಯದ ಮೂಲಕ ಕೇವಲ ಕಾಂಗ್ರೆಸ್ ಮುಖಂಡರ ಮನೆ ಮೇಲೆ ದಾಳಿ ,,,
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on

ಮೈಸೂರು: ಸರ್ಕಾರದ ಗೌರವಕ್ಕೆ ಧಕ್ಕೆ ತರುವ ಸಲುವಾಗಿ ಕೇಂದ್ರ ಬಿಜೆಪಿ ಸರ್ಕಾರ ಜಾರಿ ನಿರ್ದೇಶನಾಲಯದ ಮೂಲಕ ಕೇವಲ ಕಾಂಗ್ರೆಸ್ ಮುಖಂಡರ ಮನೆ ಮೇಲೆ ದಾಳಿ ನಡೆಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಮೈಸೂರಲ್ಲಿ ಮಾತನಾಡಿದ ಅವರು, ಬಿಜೆಪಿಯೇತರ  ಸರ್ಕಾರಗಳು ಇರುವ ರಾಜ್ಯಗಳಲ್ಲಿ ಮಾತ್ರ ದಾಳಿ ನಡೆಯುತ್ತಿರುವುದು ರಾಜಕೀಯ ದುರುದ್ದೇಶದಿಂದ ಕೂಡಿದೆ ಎಂದು ಅವರು ದೂರಿದ್ದಾರೆ.

ಗುಜರಾತ್‌, ಮಧ್ಯಪ್ರದೇಶ ಬಿಜೆಪಿ ನಾಯಕರ ಬಳಿ ಹಣವಿಲ್ಲವೆ? ಅವರ ನಿವಾಸಗಳ ಮೇಲೆ ಏಕೆ ದಾಳಿ ನಡೆಯುತ್ತಿಲ್ಲ. ಕೇವಲ ಕರ್ನಾಟಕವನ್ನೇಕೆ ಗುರಿಯಾಗಿಸಿಕೊಂಡಿದ್ದಾರೆ ಎಂದೂ ಪ್ರಶ್ನಿಸಿದರು. ನನ್ನ ವಿರುದ್ಧ ಮಾಡಿರುವ ಆರೋಪಗಳ ಸಂಬಂಧ ದಾಖಲೆ ನೀಡಲಿ ಎಂದು ಸವಾಲು ಹಾಕಿದ್ದಾರೆ.

ಎಲ್ಲ ಸಚಿವರು ಹಾಗೂ ಶಾಸಕರು ನನಗೆ ಆಪ್ತರು. ಸಚಿವ ರಮೇಶ್‌ ಜಾರಕಿಹೊಳಿ ಮನೆ ಮೇಲೆ ದಾಳಿ ನಡೆಸಿ ವಶಪಡಿಸಿಕೊಂಡಿರುವ ಹಣದ ಬಗ್ಗೆ ಮಾಹಿತಿ ಒದಗಿಸುವಂತೆ ಮುಖ್ಯ ಕಾರ್ಯದರ್ಶಿ ಮೂಲಕ ಆದಾಯ ತೆರಿಗೆ ಇಲಾಖೆಗೆ ಪತ್ರ ಬರೆಸಿದ್ದೆ. ಈ ಬಗ್ಗೆ ಯಾವುದೇ ಮಾಹಿತಿ ನೀಡುತ್ತಿಲ್ಲ. ಆದರೆ, ಚುನಾವಣಾ ರ್‌್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಐಟಿ ದಾಳಿ ಬಗ್ಗೆ ಮಾಹಿತಿ ನೀಡುತ್ತಾರೆ. ಅವರಿಗೆ ಹೇಗೆ ಮಾಹಿತಿ ಲಭಿಸಿತು? ಇವೆಲ್ಲ ರಾಜಕೀಯಪ್ರೇರಿತ ನಡೆ’ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com