ಯಡಿಯೂರಪ್ಪ ವಿರುದ್ಧ 10 ಕೋಟಿ ರು ಮಾನನಷ್ಟ ಮೊಕದ್ದಮೆ: ಗೋವಿಂದರಾಜು

ನನ್ನ ಮೇಲೆ ಆಧಾರರಹಿತ ಆರೋಪ ಮಾಡಿ ನನ್ನ ವ್ಯಕ್ತಿತ್ವಕ್ಕೆ ಕುಂದು ಉಂಟು ಮಾಡಿರುವ ಯಡಿಯೂರಪ್ಪ ವಿರುದ್ಧ 10 ಕೋಟಿ ರು ಮಾನನಷ್ಟ ...
ಗೋವಿಂದರಾಜು ಮತ್ತು ಯಡಿಯೂರಪ್ಪ
ಗೋವಿಂದರಾಜು ಮತ್ತು ಯಡಿಯೂರಪ್ಪ
Updated on

ಬೆಂಗಳೂರು:  ನನ್ನ ಮೇಲೆ ಆಧಾರರಹಿತ ಆರೋಪ ಮಾಡಿ ನನ್ನ ವ್ಯಕ್ತಿತ್ವಕ್ಕೆ ಕುಂದು ಉಂಟು ಮಾಡಿರುವ ಯಡಿಯೂರಪ್ಪ ವಿರುದ್ಧ 10 ಕೋಟಿ ರು ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ವಿಧಾನ ಪರಿಷತ್ ಸದಸ್ಯ ಕೆ.ಗೋವಿಂದರಾಜ್‌ ಹೇಳಿದ್ದಾರೆ.

ಯಡಿಯೂರಪ್ಪ ಅವರು ನನ್ನ ವಿರುದ್ಧ ಮಾಡಿರುವ ಆರೋಪಗಳ ಕುರಿತು ದಾಖಲೆಗಳು ಬಿಡುಗಡೆ ಮಾಡಬೇಕು ಇಲ್ಲವೇ ಬೇಷರತ್ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿರುವ ಅವರು ಬಿಎಸ್ವೈ ವಿರುದ್ಧ ಸಿವಿಲ್ ಹಾಗೂ ಕ್ರಿಮಿನಲ್ ಮೊಕದ್ದಮೆ ಹೂಡುವ ಎಚ್ಚರಿಕೆ ನೀಡಿದ್ದಾರೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಎಂಎಲ್ ಸಿ ಗೋವಿಂದರಾಜು ಕಾಂಗ್ರೆಸ್ ಹೈಕಮಾಂಡ್ ಗೆ 1000 ಕೋಟಿ ರು ಕಪ್ಪ ಸಲ್ಲಿಸಿದ್ದಾರೆ ಎಂದು ಮಾಜಿ ಸಿಎಂ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಆರೋಪಿಸಿದ್ದರು.

ಈ ಸಂಬಂಧ ನಿನ್ನೆ ನಡೆದ ವಿಧಾನ ಸಭೆ ಕಲಾಪದಲ್ಲಿ ಉಭಯ ಸದನಗಳಲ್ಲಿ ಕಾವೇರಿದ ಚರ್ಚೆ ನಡೆಯಿತು. ನಾನು ಈ ಸಂಬಂಧ ಆದಾಯ ತೆರಿಗೆ ಇಲಾಖೆಗೆ ಪತ್ರ ಬರೆದು ದಾಳಿಯ ವಿವರವನ್ನು ಯಡಿಯೂರಪ್ಪ ಅವರಿಗೆ ನೀಡಲಾಗಿದೆಯೆ ಎಂಬ ಬಗ್ಗೆ ಮಾಹಿತಿ ಕೋರುವುದಾಗಿ ಅವರು ಹೇಳಿದ್ದಾರೆ.

ಯಾವುದೇ ದಾಖಲೆ, ಆಧಾರಗಳಿಲ್ಲದೇ ವ್ಯಕ್ತಿಯೊಬ್ಬರ ವಿರುದ್ಧ ಹೇಗೆ ಆರೋಪ ಮಾಡುತ್ತಾರೆ ಎಂದು ಪ್ರಶ್ನಿಸಿದ ಅವರು, ಸದನದಲ್ಲಿ ಹಕ್ಕು ಚ್ಯುತಿ ಮಂಡಿಸಲು ಅವಕಾಶ ಕೋರುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com