ಬಿಎಸ್‌ವೈ ಮತ್ತು ಅನಂತಕುಮಾರ್‌ ವಿರುದ್ಧ ಎಸಿಬಿಗೆ ಕಾಂಗ್ರೆಸ್ ದೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದದ ಆರೋಪಕ್ಕೆ ಸಂಬಂಧಿಸಿದ್ದಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...
ಸಂಭಾಷಣೆ ನಿರತ ಬಿಎಸ್ ವೈ ಹಾಗೂ ಯಡಿಯೂರಪ್ಪ
ಸಂಭಾಷಣೆ ನಿರತ ಬಿಎಸ್ ವೈ ಹಾಗೂ ಯಡಿಯೂರಪ್ಪ
Updated on: 
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದದ ಆರೋಪಕ್ಕೆ ಸಂಬಂಧಿಸಿದ್ದಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ)ಯ ಕಾನೂನು ಘಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಅನಂತಕುಮಾರ್‌ ಅವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳಕ್ಕೆ(ಎಸಿಬಿ) ಬುಧವಾರ  ದೂರು ನೀಡಿದೆ.
ಸಿದ್ದರಾಮಯ್ಯ ಅವರು ಹೈಕಮಾಂಡ್ ಗೆ ಒಂದು ಸಾವಿರ ಕೋಟಿ ರುಪಾಯಿ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಹಾಗೂ ಅನಂತಕುಮಾರ್ ನಡುವಿನ ಸಂಭಾಷಣೆ ಕುರಿತು ಕೆಪಿಸಿಸಿ ಕಾನೂನು ಘಟಕ ಎಸಿಬಿಗೆ ದೂರು ನೀಡಿದ್ದು, ಈ ಬಗ್ಗೆ ವಿಸ್ತೃತ ತನಿಖೆ ನಡೆಸಬೇಕು ಮತ್ತು ಸಂಭಾಷಣೆ ನಡೆದ ಬಿಜೆಪಿ ಕಚೇರಿಯಲ್ಲಿರುವ ಸಿಸಿಟಿವ ದೃಶ್ಯಗಳನ್ನು ವಶಕ್ಕೆ ಪಡೆಯಬೇಕು ಎಂದು ಆಗ್ರಹಿಸಿದೆ.
ಯಡಿಯೂರಪ್ಪ ಮತ್ತು ಅನಂತಕುಮಾರ್‌ ನಡುವೆ ನಡೆದ ಸಂಭಾಷಣೆಯ ಪ್ರಕಾರ, ತಾವು ಲಂಚರೂಪದಲ್ಲಿ ಬಿಜೆಪಿ ಹೈಕಮಾಂಡ್‌ಗೆ ಹಣ ನೀಡಿರುವುದನ್ನು ಒಪ್ಪಿಕೊಂಡಿದ್ದು, ಆ ಇಬ್ಬರು ನಾಯಕರು ಈ ಕೂಡಲೇ ತಮ್ಮ ಸ್ಥಾನಗಳಿಗೆ ರಾಜಿನಾಮೆ ನೀಡಬೇಕು ಮತ್ತು ಸರ್ಕಾರ ಬಿಜೆಪಿ ಕಚೇರಿಯನ್ನು ಮುಟ್ಟುಗೋಲು ಹಾಕಬೇಕು ಎಂದು ಎಂದು ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಧನಂಜಯ್ ಅವರು ಒತ್ತಾಯಿಸಿದ್ದಾರೆ.
ಒಂದು ವೇಳೆ ಅವರು ರಾಜಿನಾಮೆ ನೀಡದೇ ಹೋದಲ್ಲಿ ಅವರ ಮುಖವಾಡವನ್ನು ಜನತಾ ನ್ಯಾಯಾಲಯದಲ್ಲಿ ಕಳಚಲಾಗುವುದು. ಅಂದೂ ಭ್ರಷ್ಟರು ಇಂದೂ ಭ್ರಷ್ಟರೂ ಅಂತ ಹೋರಾಟ ಮಾಡುತ್ತೇವೆ ಎಂದು ಧನಂಜಯ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com