ಯಡಿಯೂರಪ್ಪ ಒಬ್ಬ ಮಾನಸಿಕ ಅಸ್ವಸ್ಥ, ಅವರಿಗೆ ಚಿಕಿತ್ಸೆ ಅಗತ್ಯ: ದಿನೇಶ್ ಗುಂಡೂರಾವ್

ಯಡಿಯೂರಪ್ಪ ಒಬ್ಬ ಮಾನಸಿಕ ಅಸ್ವಸ್ಥ, ಹೀಗಾಗಿ ಅವರಿಗೆ ಸರಿಯಾದ ಚಿಕಿತ್ಸೆಯ ಅವಶ್ಯಕತೆಯಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ...
ದಿನೇಶ್ ಗುಂಡೂರಾವ್
ದಿನೇಶ್ ಗುಂಡೂರಾವ್
Updated on

ಬೆಂಗಳೂರು: ಯಡಿಯೂರಪ್ಪ ಒಬ್ಬ ಮಾನಸಿಕ ಅಸ್ವಸ್ಥ, ಹೀಗಾಗಿ ಅವರಿಗೆ ಸರಿಯಾದ ಚಿಕಿತ್ಸೆಯ ಅವಶ್ಯಕತೆಯಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಬಿಜೆಪಿ ಅಧಿಕಾರಕ್ಕೆ ಬಂದರೇ 24 ಗಂಟೆಗಳಲ್ಲಿ ಸಿದ್ದರಾಮಯ್ಯರನ್ನು ಜೈಲಿಗೆ ಕಳುಹಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹಾಕಿರುವ ಸವಾಲಿಗೆ ಪ್ರತಿಕ್ರಿಯಿಸಿರುವ ಅವರು, ತಮ್ಮ ಬಳಿ ಸಾಕ್ಷಿ ಇದ್ದರೇ ಕೂಡಲೇ ಜೈಲಿಗೆ ಕಳುಹಿಸಲು ಎಂದು ತಿರುಗೇಟು ನೀಡಿದ್ದಾರೆ.

ಇನ್ನೂ 1 ವರ್ಷ 3 ತಿಂಗಳು ಏಕೆ ಯಡಿಯೂರಪ್ಪ ಕಾಯಬೇಕು, ಜಾರಿ ನಿರ್ದೇಶನಾಲಯ, ಸಿಬಿಐ ಮತ್ತು ಐಟಿ ಇಲಾಖೆಗಳು ಕೇಂದ್ರದ ಬಿಜೆಪಿ ಸರ್ಕಾರದ ನಿಯಂತ್ರಣದಲ್ಲಿವೆ. ಹೀಗಾಗಿ ಅವುಗಳನ್ನು ಬಳಸಿಕೊಂಡು ಕೂಡಲೇ ಯಡಿಯೂರಪ್ಪ ಸಾಕ್ಷಿಗಳಿದ್ದರೇ ಅವುಗಳನ್ನು ಸಾಬೀತು ಪಡಿಸಿ ಜೈಲಿಗೆ ಕಳುಹಿಸಬಹುದಲ್ಲ ಎಂದು ಪ್ರಶ್ನಿಸಿದ್ದಾರೆ.

ಯಡಿಯೂರಪ್ಪ ಅವರು ಭ್ರಷ್ಟಾಚಾರ ಆರೋಪದಲ್ಲಿ ಜೈಲಿಗೂ ಹೋಗಿ ಬಂದಿದ್ದಾರೆ. ವ್ಯಕ್ತಿಯೊಬ್ಬರನ್ನು ಜೈಲಿಗೆ ಕಳುಹಿಸಲು ಇರುವ ನ್ಯಾಯಾಂಗದ ಪ್ರಕ್ರಿಯೆ ಬಗ್ಗೆ ತಿಳಿದಿದ್ದರೂ ಯಡಿಯೂರಪ್ಪ ಏಕೆ ಹೀಗೆ ಮಾನಸಿಕ ಅಸ್ವಸ್ಥನ ರೀತಿ ವರ್ತಿಸುತ್ತಿದ್ದಾರೆ ಎಂದು ನನಗೆ ತಿಳಿಯುತ್ತಿಲ್ಲ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com