ಇದೇ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಮುಖ್ಯಮಂತ್ರಿ, ಸಚಿವ ರಮೇಶ್ ಜಾರಕಿಹೊಳಿ, ಶಾಸಕ ಕೆ.ಗೋವಿಂದರಾಜು ಹಾಗೂ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದ್ದು, ಕಾಂಗ್ರೆಸ್ ಈ ಕೂಡಲೇ ಅವರ ರಾಜಿನಾಮೆ ಪಡೆಯಬೇಕು ಎಂದು ಒತ್ತಾಯಿಸಿದರು. ಅಲ್ಲದೆ ಗೋವಿಂದರಾಜು ಅವರ ಮನೆಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿ ಸೀಜ್ ಮಾಡಿರುವ ಡೈರಿಯನ್ನು ಸಾರ್ವಜನಿಕವಾಗಿ ಬಹಿರಂಗಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.