ಇಂದು ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಗದೀಶ್ ಶೆಟ್ಟರ್ ಅವರು, ಮುಖ್ಯಮಂತ್ರಿಗಳ ಆಪ್ತ, ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ಅವರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದಾಗ ಸಿಕ್ಕ ದಿನಚರಿ ಪುಸ್ತಕದಲ್ಲಿ ಕಾಂಗ್ರೆಸ್ ಹೈಕಮಾಂಡ್‌ಗೆ ಕೋಟಿಗಟ್ಟಲೆ ಹಣ ಕೊಟ್ಟಿರುವ ಅಂಶಗಳು ಉಲ್ಲೇಖವಾಗಿವೆ. ಹೀಗಾಗಿ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಪಡಿಸಿದರು.