ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಯಡಿಯೂರಪ್ಪ ಅವರ ವಿರುದ್ಧ ಇರುವ 15 ಪ್ರಕರಣಗಳ ಬಗ್ಗೆ ಚರ್ಚೆ ನಡೆದಿದ್ದು, ಈ ಪೈಕಿ ಡಿನೋಟಿಫಿಕೇಷನ್ ಪ್ರಕರಣಗಳು ಹೆಚ್ಚಿವೆ. ಭ್ರಷ್ಟಾಚಾರ, ಡಿನೋಟಿಫಿಕೇಷನ್ ಪ್ರಕರಣಗಳಿಗೆ ಜೀವ ನೀಡುವುದರ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ನೇತೃತ್ವದಲ್ಲಿ ನಡೆದ ಕೆಪಿಸಿಸಿ ಸಮನ್ವಯ ಸಮಿತಿಯಲ್ಲಿ ಚರ್ಚಿಸಲಾಗಿದೆ.