ನಂಜನಗೂಡು ಉಪಚುನಾವಣೆ: ಪ್ರಬಲ ಅಭ್ಯರ್ಥಿಗಾಗಿ ಕಾಂಗ್ರೆಸ್ ಹುಡುಕಾಟ

ಹಳೆ ಮೈಸೂರು ಭಾಗದಲ್ಲಿ ಪಕ್ಷಕ್ಕೆ ಸಮರ್ಥ ದಲಿತ ನಾಯಕರಾಗಿದ್ದ ಮಾಜಿ ಸಚಿವ ಶ್ರೀನಿವಾಸ ಪ್ರಸಾದ್ ಅವರು ಬಿಜೆಪಿಗೆ ಸೇರ್ಪಡೆಯಾಗುತ್ತಿರುವುದರಿಂದ ಕಾಂಗ್ರೆಸ್...
ಕಾಂಗ್ರೆಸ್
ಕಾಂಗ್ರೆಸ್
Updated on: 
ಬೆಂಗಳೂರು: ಹಳೆ ಮೈಸೂರು ಭಾಗದಲ್ಲಿ ಪಕ್ಷಕ್ಕೆ ಸಮರ್ಥ ದಲಿತ ನಾಯಕರಾಗಿದ್ದ ಮಾಜಿ ಸಚಿವ ಶ್ರೀನಿವಾಸ ಪ್ರಸಾದ್ ಅವರು ಬಿಜೆಪಿಗೆ ಸೇರ್ಪಡೆಯಾಗುತ್ತಿರುವುದರಿಂದ ಕಾಂಗ್ರೆಸ್ ಪ್ರಬಲ ಅಭ್ಯರ್ಥಿಯ ಹುಡುಕಾಟದಲ್ಲಿ ತೊಡಗಿದೆ. 
ರಾಜ್ಯ ಚುನಾವಣಾ ಆಯೋಗ ಈ ವಾರದಲ್ಲಿ ನಂಜನಗೂಡು ವಿಧಾನಸಭಾ ಮರುಚುನಾವಣಾ ದಿನಾಂಕವನ್ನು ಘೋಷಿಸಲಿದ್ದು, ಶ್ರೀನಿವಾಸ ಪ್ರಸಾದ್ ಅವರಿಗೆ ಪ್ರಬಲ ಸ್ಪರ್ಧಿಯಾಗುವ ಅಭ್ಯರ್ಥಿಯ ಹುಡುಕಾಟದಲ್ಲಿ ತೊಡಗಿದೆ. 
ಪ್ರಥಮವಾಗಿ ಸಚಿವ ಎಚ್.ಸಿ ಮಹದೇವಪ್ಪ ಪುತ್ರ ಸುನೀಲ್ ಬೋಸ್ ಅವರ ಹೆಸರು  ಕೇಳಿಬರುತ್ತಿದೆ. ಆದರೆ ಸದ್ಯ ಕಾಂಗ್ರೆಸ್ ಯಾವುದೇ ಹೆಸರನ್ನು ಅಂತಿಗೊಳಿಸಿಲ್ಲ. 
ಸೂಕ್ತ ಅಭ್ಯರ್ಥಿ ಆಯ್ಕೆಗಾಗಿ ಕಾಂಗ್ರೆಸ್ ವೀಕ್ಷಕರನ್ನು ನೇಮಕ ಮಾಡಿದೆ. ಆ ಕ್ಷೇತ್ರದಲ್ಲಿ ಸ್ಪರ್ಧಿಸಲು ಹಲವು ಮಂದಿ ಆಕಾಂಕ್ಷಿತರಾಗಿದ್ದಾರೆ. ಸ್ಥಳೀಯರ ಅಭಿಪ್ರಾಯ ಸಂಗ್ರಹಿಸಿದ ನಂತರ ಮುಖ್ಯಮಂತ್ರಿಗಳು ಹಾಗೂ ಹೈಕಮಾಂಡ್ ಜತೆ ಚರ್ಚಿಸಿ ಅಭ್ಯರ್ಥಿ ಅಂತಿಮಗೊಳಿಸಲಾಗುವುದು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com