

ಬೆಂಗಳೂರು: ಕಾಂಗ್ರೆಸ್ ತೊರೆಯದಂತೆ ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರ ಮನವೊಲಿಸುವಲ್ಲಿ ಸಿಎಂ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ.
ಇಬ್ರಾಹಿಂ ಅವರ ಮನೆಗೆ ಮಧ್ಯಾಹ್ನ ಭೇಟಿ ನೀಡಿದ್ದ ಸಿದ್ದರಾಮಯ್ಯ ಸುಮಾರು ಎರಡು ಗಂಟೆ ಮಾತುಕತೆ ನಡೆಸಿದರು. ಅನಂತರ ಬಿರಿಯಾನಿ ಸವಿದು ಅಲ್ಲಿಂದ ಹೊರಟರು. ನಂತರ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಸಿಎಂ ಇಬ್ರಾಹಿಂ ಕಾಂಗ್ರೆಸ್ ತೊರೆಯುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.
ಇಬ್ರಾಹಿಂ ಅವರ ಮಕ್ಕಳು ದುಬೈ ನಲ್ಲಿ ಇರುತ್ತಾರೆ, ಹೀಗಾಗಿ ಪ್ರತಿ ಹೊಸ ವರ್ಷದಂದು ಅವರ ಮನೆಯಲ್ಲಿ ಊಟ ಮಾಡುತ್ತೇನೆ. ಇವತ್ತೂ ಸಹ ಊಟಕ್ಕೆ ಬನ್ನಿ ಎಂದು ಕರೆದಿದ್ದರು. ಅದಕ್ಕಾಗಿ ಬಂದಿದ್ದೇನೆ. ‘ನನ್ನ ಮತ್ತು ಇಬ್ರಾಹಿಂ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಅವರಎಂದು ಮುಖ್ಯಮಂತ್ರಿ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು. ಇಬ್ರಾಹಿಂ ಅವರು ಯಾವುದೇ ಕಾರಣಕ್ಕೂ ಜೆಡಿಎಸ್‌ಗೆ ಹೋಗುವುದಿಲ್ಲ. ಅವರು ನನಗೆ ಒಳ್ಳೆಯ ಸ್ನೇಹಿತರು. ಕಾಂಗ್ರೆಸ್ ಏಕೆ ಬಿಡುತ್ತಾರೆ? ಎಂದು ಸಿದ್ದರಾಮಯ್ಯ ಅವರು ಪ್ರಶ್ನಿಸಿದರು.
ಎಚ್. ಡಿ ದೇವೇಗೌಡರು ನನಗೆ ತಂದೆ ಸಮಾನರು. ಆದರೆ, ಕಾಂಗ್ರೆಸ್ ತೊರೆಯುವ ಪ್ರಶ್ನೆಯೇ ಇಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿಯೇ ಮುಂದಿನ ಚುನಾವಣೆ ಎದುರಿಸುತ್ತೇವೆ ಎಂದು ಸಿ.ಎಂ.ಇಬ್ರಾಹಿಂ ಅವರು ಹೇಳಿದರು.