ಬಿಜೆಪಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ
ಬಿಜೆಪಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ

ಯಡಿಯೂರಪ್ಪ ವರ್ತನೆ ಬದಲಿಸಿಕೊಳ್ಳುವವರೆಗೂ ವಿಶ್ರಾಂತಿಯಿಲ್ಲ: ಬಿಜೆಪಿ ಭಿನ್ನಮತೀಯರು

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ತಿರುಗಿಬಿದ್ದಿರುವ ಬಿಜೆಪಿ ನಾಯಕರು, ಮಾಜಿ ಶಾಸಕ ಸೊಗಡು ಶಿವಣ್ಣ ನಿವಾಸದಲ್ಲಿ ಅತೃಪ್ತ ಬಣದ ಸಭೆ ನಡೆಸುವ ಮೂಲಕ ಯಡಿಯೂರಪ್ಪ ದುರ್ವರ್ತನೆ ಸರಿಪಡಿಸಿಕೊಳ್ಳುವವರೆಗೂ ವಿಶ್ರಾಂತಿ ತೆಗೆದುಕೊಳ್ಳುವುದಿಲ್ಲವೆಂಬ ಸಂದೇಶವೊಂದನ್ನು...
Published on

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ತಿರುಗಿಬಿದ್ದಿರುವ ಬಿಜೆಪಿ ನಾಯಕರು, ಮಾಜಿ ಶಾಸಕ ಸೊಗಡು ಶಿವಣ್ಣ ನಿವಾಸದಲ್ಲಿ ಅತೃಪ್ತ ಬಣದ ಸಭೆ ನಡೆಸುವ ಮೂಲಕ ಯಡಿಯೂರಪ್ಪ ದುರ್ವರ್ತನೆ ಸರಿಪಡಿಸಿಕೊಳ್ಳುವವರೆಗೂ ವಿಶ್ರಾಂತಿ ತೆಗೆದುಕೊಳ್ಳುವುದಿಲ್ಲವೆಂಬ ಸಂದೇಶವೊಂದನ್ನು ಬುಧವಾರ ರವಾನಸಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ಜೊತೆ ಭಿನ್ನಮತೀಯರು ಸಭೆ ನಡೆಸಿದ್ದರು. ಇದರ ಬೆನ್ನಲ್ಲೇ ನಿನ್ನೆ ಮಾಜಿ ಶಾಸಕ ಸೊಗಡು ಶಿವಣ್ಣ ನಿವಾಸದಲ್ಲಿಯೂ ಅತೃಪ್ತ ನಾಯಕರು ಸಭೆ ನಡೆಸಿದ್ದರು. ಸಭೆಗೆ ಬಿಜೆಪಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಅವರು ಹಾಜರಾಗಿದ್ದರು. ಈ ಮೂಲಕ ತಮ್ಮ ದುರ್ನಡತೆಯನ್ನು ಸರಿಪಡಿಸಿಕೊಳ್ಳುವವರೆಗೂ ತಮಗೆ ವಿಶ್ರಾಂತಿ ಇಲ್ಲ ಎಂಬ ಸಂದೇಶವನ್ನು ರವಾನಿಸಿದ್ದಾರೆ.

ಸಭೆ ಬಳಿ ಮಾತನಾಡಿರುವ ಈಶ್ವರಪ್ಪ ಅವರು, ಪಕ್ಷ ಕಟ್ಟಲು ಯಡಿಯೂರಪ್ಪ ಅವರು ಸಾಕಷ್ಟು ಶ್ರಮ ಪಟ್ಟಿದ್ದರು. ಆ ವ್ಯಕ್ತಿಯಂತೆ ಇಂದು ಯಡಿಯೂರಪ್ಪ ಅವರು ಇಲ್ಲ. ಪಕ್ಷಕ್ಕಾಗಿ ಶ್ರಮಪಟ್ಟ ವ್ಯಕ್ತಿಗಳಿಗಿಂತ ಇತರೆ ಪಕ್ಷಗಳಿಂದ ಬಿಜೆಪಿಗೆ ಸೇರ್ಪಡೆಗೊಂಡಿರುವವರಿಗೆ ಯಡಿಯೂರಪ್ಪ ಅವರು ಪ್ರಾಮುಖ್ಯತೆಯನ್ನು ನೀಡುತ್ತಿದ್ದಾರೆ. ಪಕ್ಷದ ದಿಗ್ಗಜರಾಗಿರುವ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಮತ್ತು ಶ್ಯಾಮ್ ಪ್ರಸಾದ್ ಮುಖರ್ಜಿಯವರ ಬಗ್ಗೆ ಅವರಿಗೆ ಗೊತ್ತಿಲ್ಲ. ಮುಂದೆ ಯಾವುದೇ ಬೆಳವಣಿಗೆಗಳಾದರೂ ಅದಕ್ಕೆ ಪಕ್ಷವೇ ಜವಾಬ್ದಾರಿಯಾಗಲಿದೆ ಎಂದು ಹೇಳಿದ್ದಾರೆ.

ಇದೇ ವೇಳೆ ಯಡಿಯೂರಪ್ಪ ಅವರ ವಿರುದ್ಧ ಆರೋಪ ಮಾಡಿರುವ ಅವರು, ಯಡಿಯೂರಪ್ಪ ಅವರ ತಮ್ಮ ಸುತ್ತಲು ಇರುವ ವ್ಯಕ್ತಿಗಳಿಗಾಗಿ ಕೆಲಸ ಮಾಡುತ್ತಿದ್ದಾರೆ. 2018ರಲ್ಲಿ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಆಂಭವಾಗಲಿದ್ದು, ಇದು ಪಕ್ಷ ಹಾಳಾಗಲು ಅವಕಾಶ ಮಾಡಿಕೊಡುತ್ತದೆ ಎಂದು ತಿಳಿಸಿದ್ದಾರೆ. ಅಲ್ಲದೆ, ರಾಯಣ್ಣ ಬ್ರಿಗೇಡ್ ಕುರಿತಂತೆ ಪಕ್ಷದಲ್ಲಿ ಉಂಟಾಗಿರುವ ಬಿರುಕು ಕುರಿತಂತೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಮೇಲೆ ಜವಾಬ್ದಾರಿ ಹೊರಿಸಿರುವುದಕ್ಕೆ ಯಡಿಯೂರಪ್ಪ ಅವರ ಮೇಲೆ ಈಶ್ವರಪ್ಪ ಕಿಡಿಕಾರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com