ಯಡಿಯೂರಪ್ಪ- ಈಶ್ವರಪ್ಪ
ಯಡಿಯೂರಪ್ಪ- ಈಶ್ವರಪ್ಪ

ರಾಯಣ್ಣ ಬ್ರಿಗೇಡ್ ವಿವಾದ: ರಾಜ್ಯ ಬಿಜೆಪಿ ನಾಯಕರಿಗೆ ವರಿಷ್ಠರ ಬುಲಾವ್

ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿಯಲ್ಲಿ ಉದ್ಭವಿಸಿರುವ ಭಿನ್ನಮತ ಶಮನಕ್ಕಾಗಿ ಪಕ್ಷದ ಹೈಕಮಾಂಡ್...
ಬೆಂಗಳೂರು: ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿಯಲ್ಲಿ ಉದ್ಭವಿಸಿರುವ ಭಿನ್ನಮತ ಶಮನಕ್ಕಾಗಿ ಪಕ್ಷದ ಹೈಕಮಾಂಡ್ ರಾಜ್ಯ ಬಿಜೆಪಿ ನಾಯಕರಿಗೆ ಹಾಗೂ ಆರ್ಎಸ್ಎಸ್ ನಾಯಕರಿಗೆ ಬುಧವಾರ ಬುಲಾವ್ ನೀಡಿದೆ.
ಬ್ರಿಗೇಡ್ ವಿವಾದ ಪರಿಹಾರಕ್ಕಾಗಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಜನವರಿ 27ರಂದು ದೆಹಲಿಯ ತಮ್ಮ ನಿವಾಸದಲ್ಲಿ ಸಭೆ ಕರೆದಿದ್ದು, ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಅನಂತಕುಮಾರ್, ರಾಯಣ್ಣ ಬ್ರಿಗೇಡ್ ನೊಂದಿಗೆ ಗುರುತಿಸಿಕೊಂಡಿರುವ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಂತೋಷ್ ಅವರಿಗೆ ಸಭೆಗೆ ಬರುವಂತೆ ಸೂಚನೆ ನೀಡಲಾಗಿದೆ. ಅಲ್ಲದೆ ಆರ್ ಎಸ್ಎಸ್ ಪ್ರಮುಖರಿಗೂ ಬುಲ್ ನೀಡಲಾಗಿದೆ ಎಂದು ವರದಿ ಮಾಡಲಾಗಿದೆ.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಯಡಿಯೂರಪ್ಪ ಅವರು, ಅಮಿತ್ ಶಾ ಅವರ ಸಮ್ಮುಖದಲ್ಲಿ ಮಾತುಕತೆ ಮೂಲಕ ಬ್ರಿಗೇಡ್ ಸಮಸ್ಯೆ ಬಗೆಹರಿಸಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಈಶ್ವರಪ್ಪ ಅವರು ಬ್ರಿಗೇಡ್‌ ಸಭೆಗಳಲ್ಲಿ ಪಾಲ್ಗೊಂಡು ಬಿ.ಎಸ್‌. ಯಡಿಯೂರಪ್ಪ ವಿರುದ್ದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದರಿಂದ ಪಕ್ಷ ಸಂಘಟನೆಗೆ ಅಡ್ಡಿಯಾಗುತ್ತಿದೆ. ಆದ್ದರಿಂದ ಕೂಡಲೇ ಈಶ್ವರಪ್ಪ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಶಾಸಕರು, ಮಾಜಿ ಶಾಸಕರ ಸಹಿಯೊಂದಿಗೆ ಪಕ್ಷದ ವರಿಷ್ಠರಿಗೆ ದೂರು ನೀಡಿದ್ದರು.

Related Stories

No stories found.

Advertisement

X
Kannada Prabha
www.kannadaprabha.com