ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ಷಮೆ ಕೋರದಿದ್ದರೇ ಕಾನೂನು ಹೋರಾಟ ನಡೆಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಹಾಗೂ ನನ್ನ ವಿರುದ್ಧ ಕೀಳು ಭಾಷೆಯಲ್ಲಿ ಟೀಕಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಬಹಿರಂಗವಾಗಿ ಕ್ಷಮೆ ಕೇಳದಿದ್ದರೆ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಬಿ.ಎಸ್. ವೈ ಹೇಳಿದ್ದಾರೆ.
ಸಂಪಂಗಿರಾಮನಗರದಲ್ಲಿ ಮಂಗಳವಾರ ವಿಸ್ತಾರಕ್ ಕಾರ್ಯಕ್ರಮದಡಿ ಮನೆ ಮನೆ ಸಂಪರ್ಕಿಸುವ ಅಭಿಯಾನ ಆರಂಭಿಸಿದ ಬಳಿಕ ಮಾತನಾಡಿದ ಅವರು ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಾರದೇ ಇದ್ದರೆ ಅಮಿತ್ ಷಾ ಹಾಗೂ ಯಡಿಯೂರಪ್ಪ ಜೈಲಿನಲ್ಲಿ ಇರುತ್ತಿದ್ದರು ಎಂದು ಸಿದ್ದರಾಮಯ್ಯ ಟೀಕಿಸಿದ್ದರು.
ಇದಕ್ಕೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ದಲಿತರ ಕೇರಿಗಳಲ್ಲಿ ನಮಗೆ ಸಿಕ್ಕಿರುವ ಜನ ಬೆಂಬಲದಿಂದ ವಿಚಲಿತರಾಗಿರುವ ಸಿದ್ದರಾಮಯ್ಯ ನಮ್ಮ ಬಗ್ಗೆ ಇಲ್ಲಸಲ್ಲದ ಟೀಕೆ ಮಾಡುತ್ತಿದ್ದಾರೆ ಎಂದು ಕಿಡಿ ಕಾರಿದರು.
ದಲಿತರ ಮನೆಯಲ್ಲಿ ಆತಿಥ್ಯ ಸ್ವೀಕರಿಸಿರುವ ಯಡಿಯೂರಪ್ಪ ಅವರಿಗಾಗಿ ತಮ್ಮ ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಭೋಜನಕೂಟ ಏರ್ಪಡಿಸಿರುವುದಾಗಿ ಯಡಿಯೂರಪ್ಪ ಹೇಳಿದ್ದಾರೆ.