ಮೈಸೂರಿನಲ್ಲಿ ಕಾಂಗ್ರೆಸ್‌ಗೆ ಮುಖಭಂಗ: ಪಾಲಿಕೆ ಉಪಚುನಾವಣೆಯಲ್ಲಿ ಜೆಡಿಎಸ್‌ಗೆ ಜಯ

ಮೈಸೂರು ಮಹಾನಗರ ಪಾಲಿಕೆಯ 32ನೇ ವಾರ್ಡ್ ಗೆ ನಡೆದ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಎಂ ಮಂಜು ಅವರು ಜಯ ಗಳಿಸಿದ್ದಾರೆ...
ಸಂಭ್ರಮಿಸುತ್ತಿರುವ ಜೆಡಿಎಸ್ ಕಾರ್ಯಕರ್ತರು
ಸಂಭ್ರಮಿಸುತ್ತಿರುವ ಜೆಡಿಎಸ್ ಕಾರ್ಯಕರ್ತರು
ಮೈಸೂರು: ಮೈಸೂರು ಮಹಾನಗರ ಪಾಲಿಕೆಯ 32ನೇ ವಾರ್ಡ್ ಗೆ ನಡೆದ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಎಂ ಮಂಜು ಅವರು ಜಯ ಗಳಿಸಿದ್ದಾರೆ. 
ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಠೇವಣಿ ಕಳೆದುಕೊಂಡಿರುವುದು ಕಾಂಗ್ರೆಸ್ ಗೆ ತೀವ್ರ ಮುಖಭಂಗ ಅನುಭವಿಸಿದೆ. 
ಗೆಲುವಿಗಾಗಿ ಬಿಜೆಪಿ ಅಭ್ಯರಥಿ ಕೆ ಮಾದೇಶ್ ಹಾಗೂ ಜೆಡಿಎಸ್ ಅಭ್ಯರ್ಥಿ ಎಸ್ ಬಿ ಎಂ ಮಂಜು ನಡುವೆ ತೀವ್ರ ಹಣಾಹಣಿ ನಡೆದಿತ್ತು. ಕೊನೆಗೆ ಮಂಜು 300ಕ್ಕೂ ಹೆಚ್ಚು ಮತಗಳನ್ನು ಪಡೆಯುವ ಮೂಲಕ ಜಯ ಗಳಿಸಿದರು. ಉಪಚುನಾವಣೆಯಲ್ಲಿ ಒಟ್ಟು 4,923 ಮತದಾರರು ಮತ ಚಲಾಯಿಸಿದ್ದರು. 
ಇದರಲ್ಲಿ ಜೆಡಿಎಸ್ ಅಭ್ಯರ್ಥಿ ಮಂಜು 2424, ಬಿಜೆಪಿ ಅಭ್ಯರ್ಥಿ ಕೆ.ಮಾದೇಶ್ 2117 ಹಾಗೂ ಕಾಂಗ್ರೆಸ್ ಅಭ್ಯರ್ಥಿ ಬಿಕೆ ಪ್ರಕಾಶ್ 329 ಮತ ಲಭಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com