ಆಪರೇಷನ್ ಕಮಲದ ಭೀತಿ, ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸದ್ಯಕ್ಕಿಲ್ಲ: ದೇವೇಗೌಡ

2018ರ ವಿಧಾನಸಭೆ ಚುನಾವಣೆಗೆ ಶೀಘ್ರವೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವುದಾಗಿ ಹೇಳಿದ್ದ ಜೆಡಿಎಸ್ ಸದ್ಯ ಪಟ್ಟಿ ಪ್ರಕಟಿಸದಿರಸಲು...
ಎಚ್.ಡಿ ದೇವೇಗೌಡ
ಎಚ್.ಡಿ ದೇವೇಗೌಡ
ಬೆಂಗಳೂರು:  2018ರ ವಿಧಾನಸಭೆ ಚುನಾವಣೆಗೆ ಶೀಘ್ರವೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವುದಾಗಿ ಹೇಳಿದ್ದ ಜೆಡಿಎಸ್ ಸದ್ಯ ಪಟ್ಟಿ ಪ್ರಕಟಿಸದಿರಸಲು ನಿರ್ಧರಿಸಿದೆ. 
ಆಪರೇಷನ್ ಕಮಲದ ಅನುಭವದಿಂದ  ಎಚ್ಚೆತ್ತುಕೊಂಡಿರುವ ಜೆಡಿಎಸ್ ಈಗಲೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವುದಿಲ್ಲ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ತಿಳಿಸಿದ್ದಾರೆ.
ಹಿಂದೆ ಪಕ್ಷದ ಅಭ್ಯರ್ಥಿಗಳನ್ನು ಘೋಷಿಸಿದ ಬಳಿಕ ಏಳೆಂಟು ಜನರನ್ನು ಬೇರೆ ಪಕ್ಷದವರು ಸೆಳೆದಿದ್ದಾರೆ. ಹೀಗಾಗಿ ಯಾವ ಕ್ಷೇತ್ರಕ್ಕೆ ಯಾರು ಅಭ್ಯರ್ಥಿಗಳು ಎಂಬ ಪಟ್ಟಿಯನ್ನು ಮೊದಲೇ ಬಿಡುಗಡೆ ಮಾಡುವುದು ಬೇಡ ಎಂದು ಸಭೆಯಲ್ಲೂ ನಿರ್ಣಯಿಸಲಾಗಿದೆ ಎಂದರು.
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ .ಡಿ ಕುಮಾರಸ್ವಾಮಿ 150 ಅಭ್ಯರ್ಥಿಗಳ ಮೊದಲ ಪಟ್ಟಿ ಈಗಾಗಲೇ ಸಿದ್ಧವಾಗಿದೆ ಎಂದು ಹೇಳಿದ್ದರು. ಆದರೆ ಸದ್ಯಕ್ಕೆ ಪಟ್ಟಿ ಬಿಡುಗಡೆ ಮಾಡುವುದು ಬೇಡ ಎಂದು ಕುಮಾರಸ್ವಾಮಿಗೆ ದೇವೇಗೌಡರು ಸಲಹೆ ನೀಡಿದ್ದಾರೆ. 
ರಾಜ್ಯದಲ್ಲಿ ವಿಭಾಗೀಯ ಮಟ್ಟದ ಸಮಾವೇಶಗಳನ್ನು ನಡೆಸಲು ಪ್ರಮುಖರ ಸಭೆ ನಿರ್ಣಯಿಸಿದೆ. ಮೈಸೂರಿನಲ್ಲಿ ಹಿಂದುಳಿದ ವರ್ಗದ ಸಮಾವೇಶ, ವಿಜಯಪುರದಲ್ಲಿ ರೈತರ ಸಮಾವೇಶ, ರಾಯಚೂರಿನಲ್ಲಿ ಅಲ್ಪಸಂಖ್ಯಾತರ ಸಮಾವೇಶ, ತುಮಕೂರಿನಲ್ಲಿ ಪರಿಶಿಷ್ಟ ಜಾತಿಯವರ ಸಮಾವೇಶ ಹಾಗೂ ಅಂತಿಮವಾಗಿ ಬೆಂಗಳೂರಿನಲ್ಲಿ ಮಹಿಳೆಯರ ಸಮಾವೇಶ ನಡೆಸಲಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com