ರಾಜಕೀಯ ಲಾಭಕ್ಕಾಗಿ ಕೋಮು ಸಂಘರ್ಷ ಹುಟ್ಟು ಹಾಕಬೇಡಿ: ಬಿಜೆಪಿಗೆ ಸಿದ್ದರಾಮಯ್ಯ ಎಚ್ಚರಿಕೆ

ಬಿಜೆಪಿ ಸಮಾಜವನ್ನು ಧರ್ಮದ ಆಧಾರದ ಮೇಲೆ ವಿಭಜಿಸಿ, ರಾಜಕೀಯ ಲಾಭಕ್ಕಾಗಿ ಜನರ ಭಾವನೆಗಳ ಜೊತೆ ಆಟವಾಡುತ್ತಿದೆ ಮುಖ್ಯಮಂತ್ರಿ ...
ಸಿದ್ದರಾಮಯ್ಯ
ಸಿದ್ದರಾಮಯ್ಯ
ಬೆಂಗಳೂರು: ಬಿಜೆಪಿ ಸಮಾಜವನ್ನು ಧರ್ಮದ ಆಧಾರದ ಮೇಲೆ ವಿಭಜಿಸಿ, ರಾಜಕೀಯ ಲಾಭಕ್ಕಾಗಿ ಜನರ ಭಾವನೆಗಳ ಜೊತೆ ಆಟವಾಡುತ್ತಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು ಬಿಜೆಪಿ ಕತ್ತರಿಸಿಯಾಗಿ ಸಮಾಜವನ್ನು ಕತ್ತರಿಸಿದರೇ ಕಾಂಗ್ರೆಸ್ ಅದನ್ನು ಹೊಲಿಯುವ ಸೂಜಿಯಾಗಿದೆ ಎಂದು ಸಿಎಂ ಹೇಳಿದ್ದಾರೆ.
ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಬಂಧಿಸಿದರೇ ದಕ್ಷಿಣ ಕನ್ನಡ ಜಿಲ್ಲೆ ಹೊತ್ತಿ ಉರಿಯುತ್ತದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿಕೆಗ ಪ್ರತಿಕ್ರಿಯಿಸಿದ ಅವರು, ಕಲ್ಲಡ್ಕ ಪ್ರಭಾಕರ ಭಟ್‌ ಬಗ್ಗೆ ನಾನು ಯಾವ ಮಾತೂ ಆಡಿಲ್ಲ. ಆದರೆ, ಬಿಜೆಪಿಯವರೇ ಪದೇ ಪದೇ ಅವರ ತಂಟೆಗೆ ಬನ್ನಿ ಎಂಬ ಆಹ್ವಾನ ನೀಡುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ನೆಲೆಸುವುದು ಬಿಜೆಪಿಯವರಿಗೆ ಬೇಕಾಗಿಲ್ಲ ಎಂದು ಲೇವಡಿ ಮಾಡಿದರು.
ದಕ್ಷಿಣ ಕನ್ನಡ ಜಿಲ್ಲೆ ಹೊರತುಪಡಿಸಿ ರಾಜ್ಯದ ಎಲ್ಲೆಡೆ ಕಾನೂನು ಮತ್ತು ಸುವ್ಯವಸ್ಥೆ ಉತ್ತಮವಾಗಿದೆ. ನಿರ್ಮಲಾ ಸೀತಾರಾಮ್‌ ಅವರು ಉತ್ತರ ಪ್ರದೇಶ, ಮಧ್ಯಪ್ರದೇಶ, ಹರಿಯಾಣದ ಕಾನೂನು ಸುವ್ಯವಸ್ಥೆ ಬಗ್ಗೆ ಮಾತನಾಡಲಿ ಎಂದು ಹೇಳಿದರು.
ಮಂಗಳೂರನ್ನು ನಿವೃತ್ತ ಎಡಿಜಿಪಿ ಕೆಂಪಯ್ಯ ನಿರ್ವಹಿಸುತ್ತಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿಎಂ ಈ ಹೇಳಿಕೆ ಆಧಾರರಹಿತವಾದದ್ದು, ದಕ್ಷಿಣ ಕನ್ನಡ ಜಿಲ್ಲೆ ಸಹಜ ಸ್ಥಿತಿಗೆ ಮರಳಲಿ ಎಂಬ ಉದ್ದೇಶದಿಂದ ಒಬ್ಬರು ಡಿಜಿಪಿ, ಇಬ್ಬರು ಎಡಿಜಿಪಿ ಹಾಗೂ ಐಜಿಯನ್ನು ನೇಮಿಸಿದ್ದೇನೆ ಎಂದು ತಿರುಗೇಟು ನೀಡಿದರು.
ಇನ್ನೂ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮತ್ತು ಪಾಪುಲರ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರ ವಿರುದ್ಧ ಎಲ್ಲಾ ಮೊಕದ್ದಮೆಗಳನ್ನು ವಾಪಸ್ ಪಡೆಯಲಾಗಿದೆ. ಹಾಗೂ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ಹಾಗೂ ಶ್ರೀರಾಮ ಸೇನೆ ಪಿಎಫ್ ಐ, ಎಸ್ ಡಿಪಿಐ ಸಂಘಟನೆಗಳ ಚಟುವಟಿಕೆಗಳ ಮೇಲೆ ನಿಗಾ ಇಡುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com