ಗುಜರಾತ್ ಶಾಸಕರಿಗೆ ಕರ್ನಾಟಕ ದರ್ಶನ ಭಾಗ್ಯ, ಗ್ರೀನ್ ಸಿಗ್ನಲ್ ನೀಡದ 'ಕೈ' ಕಮಾಂಡ್

ಐಷಾರಾಮಿ ರೆಸಾರ್ಟ್ ನಲ್ಲಿ ಕೂತು ಕಾಲ ಕಳೆಯಲು ಬೇಸರ ವ್ಯಕ್ತಪಡಿಸಿರುವ ಬೆಂಗಳೂರು ಹೊರವಲಯದಲ್ಲಿ ವಾಸ್ತವ್ಯ ಹೂಡಿರುವ...
ಗುಜರಾತ್ ಶಾಸಕರೊಂದಿಗೆ ಡಿ ಕೆ ಶಿವಕುಮಾರ್
ಗುಜರಾತ್ ಶಾಸಕರೊಂದಿಗೆ ಡಿ ಕೆ ಶಿವಕುಮಾರ್
ಬೆಂಗಳೂರು: ಐಷಾರಾಮಿ ರೆಸಾರ್ಟ್ ನಲ್ಲಿ ಕೂತು ಕಾಲ ಕಳೆಯಲು ಬೇಸರ ವ್ಯಕ್ತಪಡಿಸಿರುವ ಬೆಂಗಳೂರು ಹೊರವಲಯದಲ್ಲಿ ವಾಸ್ತವ್ಯ ಹೂಡಿರುವ ಗುಜರಾತ್ ಶಾಸಕರನ್ನು ವಿವಿಧ ಪ್ರವಾಸಿ ತಾಣಗಳಿಗೆ ಕರೆದೊಯ್ಯಲು ಕಾಂಗ್ರೆಸ್ ಹೈಕಮಾಂಡ್ ಇನ್ನೂ ಗ್ರೀನ್ ಸಿಗ್ನಲ್ ನೀಡಿಲ್ಲ. ಹೀಗಾಗಿ ಕರ್ನಾಟಕದ ದರ್ಶನ ಭಾಗ್ಯವನ್ನು ಸದ್ಯಕ್ಕೆ ತಡೆಹಿಡಿಯಲಾಗಿದೆ.
ಶಾಸಕರನ್ನು ಆಕರ್ಷಿಸಲು ಬಿಜೆಪಿ ತೀವ್ರ ಪ್ರಯತ್ನ ನಡೆಸುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಗುಜರಾತ್ ಶಾಸಕರ ಭದ್ರತೆಯನ್ನು ಬಿಗಿಗೊಳಿಸಿದ್ದು, ಮುಂದಿನ ಆದೇಶದವರೆಗೂ ಶಾಸಕರನ್ನು ರೆಸಾರ್ಟ್ ನಿಂದ ಹೊರಗೆ ಕರೆದುಕೊಂಡು ಹೋಗದಂತೆ ರಾಜ್ಯ ಕಾಂಗ್ರೆಸ್ ನಾಯಕರಿಗೆ ಸೂಚಿಸಿದೆ.
ಗುಜಾರಾತ್ ಶಾಸಕರ ಉಸ್ತುವಾರಿ ಹಾಗೂ ಭದ್ರತೆಯ ಹೊಣೆಗಾರಿಕೆ ವಹಿಸಿಕೊಂಡಿರುವ ಇಂಧನ ಸಚಿವ ಡಿ.ಕೆ ಶಿವಕುಮಾರ್ ಅವರು ಇಂದು ಬೆಳಗ್ಗೆಯಷ್ಟೆ ರೆಸಾರ್ಟ್ ಗೆ ಭೇಟಿ ನೀಡಿ ಶಾಸಕರೊಂದಿಗೆ ಚರ್ಚಿಸಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಧಾರ್ಮಿಕ ಹಾಗೂ ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡುವ ಇಚ್ಛೆ ವ್ಯಕ್ತಪಿಡಿಸಿದ್ದಾರೆ. ಆದರೆ ಇದಕ್ಕೆ ನಮ್ಮ ರಾಷ್ಟ್ರೀಯ ನಾಯಕರ ಅನುಮತಿಗಾಗಿ ಕಾಯುತ್ತಿದ್ದೇವೆ. ಅವರ ಅನುಮತಿ ಇಲ್ಲದೆಯೇ ಶಾಸಕರನ್ನು ಹೊರಗಡೆ ಕಳುಹಿಸುವುದಿಲ್ಲ ಎಂದು ಶಿವಕುಮಾರ್ ಅವರು ತಿಳಿಸಿದ್ದಾರೆ.
ಒಂದು ವೇಳೆ ಶಾಸಕರ ಪ್ರವಾಸಕ್ಕೆ ರಾಷ್ಟ್ರೀಯ ನಾಯಕರು ಅನುಮತಿ ನೀಡಿದರೆ ಶಾಸಕರು ತಮ್ಮ ಸ್ವಂತ ಖರ್ಚಿನಲ್ಲೇ ವಿವಿಧ ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ ಎಂದು ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com