ಲೋಕಸಭಾ ಚುನಾವಣೆ: ಕಾಂಗ್ರೆಸ್ ನಿಂದ ಗೀತಾ ಶಿವರಾಜ್ ಕುಮಾರ್ ಸ್ಪರ್ಧೆ?

ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಟ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಅವರು ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲಿದ್ದಾರೆಯೇ ಎಂಬ ಪ್ರಶ್ನೆ ಮೂಡುತ್ತಿದೆ.
ರಾಜ್ ನಿವಾಸದಲ್ಲಿ ರಾಹುಲ್ ಗಾಂಧಿ
ರಾಜ್ ನಿವಾಸದಲ್ಲಿ ರಾಹುಲ್ ಗಾಂಧಿ

ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಟ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಅವರು ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲಿದ್ದಾರೆಯೇ ಎಂಬ ಪ್ರಶ್ನೆ ಮೂಡುತ್ತಿದೆ.

ನಿನ್ನೆ ಕಾಂಗ್ರೆಸ್ ಪಕ್ಷದ ಮುಖವಾಣಿ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಪುನಾರಂಭ ಕಾರ್ಯಕ್ರಮಕ್ಕಾಗಿ ಬೆಂಗಳೂರಿಗೆ ಆಗಮಿಸಿದ್ದ ರಾಹುಲ್ ಗಾಂಧಿ ಕಾರ್ಯಕ್ರಮದ ಬಳಿಕ ಸದಾಶಿವ ನಗರದಲ್ಲಿರುವ ಡಾ.ರಾಜ್ ನಿವಾಸಕ್ಕೆ ಭೇಟಿ  ನೀಡಿದ್ದರು. ಅವರದೊಂದಿಗೆ ಸಚಿವ ಡಿಕೆ ಶಿವಕುಮಾರ್ ಅವರು ಕೂಡ ಸಾಥ್ ನೀಡಿದ್ದರು. ಈ ವೇಳೆ ರಾಜ್ ಕುಟುಂಬಸ್ಥರನ್ನು ಭೇಟಿ ಮಾಡಿದ ರಾಹುಲ್ ಗಾಂಧಿ ಇತ್ತೀಚೆಗೆ ಪಾರ್ವತಮ್ಮ ರಾಜ್ ಕುಮಾರ್ ನಿಧನರಾದ ಹಿನ್ನಲೆಯಲ್ಲಿ  ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಈ ವೇಳೆ ರಾಹುಲ್ ಗಾಂಧಿ ಅವರಿಗೆ ಸಚಿವ ಡಿಕೆ ಶಿವಕುಮಾರ್ ಅವರು ರಾಜ್ ಕುಟುಂಬಸ್ಥರನ್ನು ಪರಿಚಯ ಮಾಡಿಕೊಟ್ಟರು. ಗೀತಾ ಅವರನ್ನು ಪರಿಚಯ ಮಾಡಿಕೊಟ್ಟ ಡಿಕೆಶಿವಕುಮಾರ್ ಅವರು, ಕಳೆದ ಲೋಕಸಭಾ  ಚುನಾವಣೆಯಲ್ಲಿ ಜೆಡಿಎಸ್ ನಿಂದ ಸ್ಪರ್ಧಿಸಿದ್ದರು. ಈ ಬಾರಿ ಕಾಂಗ್ರೆಸ್ ಪಕ್ಷದ ಆಭ್ಯರ್ಥಿಯಾಗಿದ್ದಾರೆ ಎಂದು ಹೇಳಿದರು. ಡಿಕೆಶಿವಕುಮಾರ್ ಅವರ ಮಾತಿಗೆ ಯಾರೂ ಕೂಡ ಚಕಾರ ಎತ್ತಲಿಲ್ಲ. ಹೀಗಾಗಿ ಮುಂದಿನ ಲೋಕಸಭಾ  ಚುನಾವಣೆಯಲ್ಲಿ ಗೀತಾ ಶಿವರಾಜ್ ಕುಮಾರ್ ಅವರು ಶಿವಮೊಗ್ಗ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆಯೇ ಎಂಬ ಅನುಮಾನ ಮೂಡ ತೊಡಗಿದೆ.

ಈ ಹಿಂದಿನ ಲೋಕಸಭಾ ಚುನಾವಣೆಯಲ್ಲಿ ಗೀತಾ ಜೆಡಿಎಸ್ ನಿಂದ ಸ್ಪರ್ಧಿಸಿ ಸೋತಿದ್ದರು.\

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com