ಕಾಂಗ್ರೆಸ್ ಗೆ ತೀವ್ರ ಮುಖಭಂಗ: ಸಭಾಪತಿಯಾಗಿ ಡಿ.ಎಚ್. ಶಂಕರಮೂರ್ತಿ ಮುಂದುವರಿಕೆ

ವಿಧಾನ ಪರಿಷತ್ ಸಭಾಪತಿ ವಿರುದ್ಧ ಸದನದಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಿದ್ದ ಕಾಂಗ್ರೆಸ್ ಗೆ ಭಾರೀ ಮುಖಭಂಗವಾಗಿದೆ...
ಡಿ.ಎಚ್ ಶಂಕರಮೂರ್ತಿ
ಡಿ.ಎಚ್ ಶಂಕರಮೂರ್ತಿ
ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ವಿರುದ್ಧ ಸದನದಲ್ಲಿ ಅವಿಶ್ವಾಸ ನಿರ್ಣಯದ ಮಂಡಿಸಿದ್ದ ಕಾಂಗ್ರೆಸ್ ಗೆ ಭಾರೀ ಮುಖಭಂಗವಾಗಿದೆ. ಅವಿಶ್ವಾಸ ನಿರ್ಣಯದ ವಿರುದ್ಧ ಕೇವಲ 36 ಮತಗಳು ಚಲಾವಣೆಯಾಗಿದ್ದು, ಡಿ.ಎಚ್ ಶಂಕರಮೂರ್ತಿ ಅವರೇ ಸಭಾಪತಿಯಾಗಿ ಮುಂದುವರಿಯಲಿದ್ದಾರೆ.
ಕಾಂಗ್ರೆಸ್ ಮಂಡಿಸಿದ್ದ ಅವಿಶ್ವಾಸ ನಿರ್ಣಯದ ವಿರುದ್ದ ಹಾಗೂ ಶಂಕರಮೂರ್ತಿ ಪರವಾಗಿ ಜೆಡಿಎಸ್ ಎಂಎಲ್ ಸಿಗಳು ಮತ ಚಲಾಯಿಸಿದ್ದಾರೆ. 
ಅಂತಿಮ ಕ್ಷಣದಲ್ಲಿ ಬದಲಾದ ರಾಜಕೀಯ ಚದುರಂಗದಾಟದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ  ಬಿಜೆಪಿಬೆ ಬೆಂಬಲ ಸೂಚಿಸಿದ ಹಿನ್ನೆಲೆಯಲ್ಲಿ  ಕಾಂಗ್ರೆಸ್ ಗೆ ಹಿನ್ನಡೆಯಾಗಿದೆ. ಹೀಗಾಗಿ ಮೇಲ್ಮನೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಮುಂದುವರಿದಿದೆ. 
ಅವಿಶ್ವಾಸ ನಿರ್ಣಯದ ವಿರುದ್ಧ 37 ಮತಗಳು ಚಲಾವಣೆಯಾದರೇ ನಿರ್ಣಯದ ಪರ 36 ಮತಗಳು ಚಲಾವಣೆಯಾಗಿ ಕೇವಲ ಒಂದು ಮತದ ಅಂತರದಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿದೆ.
ವಿಧಾನಪರಿಷತ್ ಉಪ ಸಭಾಪತಿ ಮರಿ ತಿಬ್ಬೇಗೌಡ ಎದ್ದು ನಿಂತು ಮತದಾನ ಮಾಡಲು ಅವಕಾಶ ನೀಡಿದರು. ಇನ್ನೂ ತಮಗೆ ಬೆಂಬಲ ಸೂಚಿಸಿದ್ದಕ್ಕೆ  ಶಂಕರಮೂರ್ತಿ ಜೆಡಿಎಸ್ ಸದಸ್ಯರಿಗೆ ಧನ್ಯವಾದ ಅರ್ಪಿಸಿದ್ದಾರೆ. ಪರಿಷತ್ ಕಲಾಪವನ್ನು ಮಧ್ಯಾಹ್ನಕ್ಕೆ ಮುಂದೂಡಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com