ಖರ್ಗೆ ಆರೋಗ್ಯ ವಿಚಾರಿಸುವ ನೆಪದಲ್ಲಿ ದೆಹಲಿಗೆ ತೆರಳುತ್ತಿರುವ ಸಚಿವ ಸ್ಥಾನ ಆಕಾಂಕ್ಷಿಗಳು

ಮಂಡಿನೋವಿನ ಶಸ್ತ್ರ ಚಿಕಿತ್ಸೆಗೊಳಗಾಗಿರುವ ಕಾಂಗ್ರೆಸ್ ಹಿರಿಯ ಸಂಸದ ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯ ವಿಚಾರಿಸುವ ನೆಪದಲ್ಲಿ ಸಚಿವ ಸ್ಥಾನ ಆಕಾಂಕ್ಷಿಗಳು ...
ಖರ್ಗೆ ಮತ್ತು ಮೋಟಮ್ಮ
ಖರ್ಗೆ ಮತ್ತು ಮೋಟಮ್ಮ
ಬೆಂಗಳೂರು: ಮಂಡಿನೋವಿನ ಶಸ್ತ್ರ ಚಿಕಿತ್ಸೆಗೊಳಗಾಗಿರುವ ಕಾಂಗ್ರೆಸ್ ಹಿರಿಯ ಸಂಸದ ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯ ವಿಚಾರಿಸುವ ನೆಪದಲ್ಲಿ ಸಚಿವ ಸ್ಥಾನ ಆಕಾಂಕ್ಷಿಗಳು ದೆಹಲಿಗೆ ಹೋಗಿ ಬರುತ್ತಿದ್ದಾರೆ.
ವಿಧಾನಸಭೆ ಅಧಿವೇಶನದ ನಂತರದ ಸಂಪುಟ ವಿಸ್ತರಣೆ ಮಾಡುವುದಾಗಿ ಸಿಎಂ ಘೋಷಿಸಿದ ಬೆನ್ನೆಲ್ಲೆ ದೆಹಲಿಗೆ ತೆರಳಿ ಆಕಾಂಕ್ಷಿಗಳು ಲಾಬಿ ನಡೆಸುತ್ತಿದ್ದಾರೆ. 
ದೆಹಲಿಗೆ ತೆರಳುತ್ತಿರುವ ಆಕಾಂಕ್ಷಿಗಳು ಹಿರಿಯ ಕಾಂಗ್ರೆಸ್ ಮುಖಂಡ ಆಸ್ಕರ್ ಫರ್ನಾಂಡೀಸ್ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಅವರನ್ನು ಭೇಟಿ ಮಾಡಿ ಬರುತ್ತಿದ್ದಾರೆ.
ವಿಧಾನ ಪರಿಷತ್ ಸದಸ್ಯೆ ಮೋಟಮ್ಮ ಮಹಿಳಾ ನಿಯೋಗದೊಂದಿಗೆ ಶನಿವಾರ ದೆಹಲಿಗೆ ತೆರಳಿ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ನನ್ನನ್ನು ಯಾಕೆ ಮಹಿಳಾ ಸಚಿವೆ ಸ್ಥಾನಕ್ಕೆ ಪರಿಗಣಿಸುತ್ತಿಲ್ಲ. ಈ ಮೊದಲು ನಾನು ಹಲವು ಒಳ್ಳೆಯ ಕೆಲಸಗಳನ್ನು ಮಾಡಿದ್ದೇನೆ, ನಾನು ಸಚಿವ ಸ್ಥಾನಕ್ಕೆ ಅರ್ಹಳಾಗಿದ್ದೇನೆ, ಹೀಗಾಗಿ ನನ್ನನ್ನು ಸಚಿವ ಸ್ಥಾನಕ್ಕೆ ಪರಿಗಣಿಸಬೇಕು ಎಂದು ಮೋಟಮ್ಮ ಹೇಳಿದ್ದಾರೆ. 
ಅಧಿವೇಶನ ಮುಗಿದ ನಂತರ ನಡೆಯುವ ಸಂಪುಟ ವಿಸ್ತರಣೆಯಲ್ಲಿ, ಜಿ.ಪರಮೇಶ್ವರ್ ಅವರ ರಾಜಿನಾಮೆಯಿಂದ ತೆರವಾಗಿರುವ ಗೃಹ ಸಚಿವ ಸ್ಥಾನಕ್ಕೆ ನನ್ನನ್ನು ಪರಿಗಣಿಸಬೇಕು, ನಾನು ದಲಿತ ಸಮುದಾಯಕ್ಕೆ ಸೇರಿದ್ದು, ನಾನು ಆ ಹುದ್ದೆಗೆ ಸೂಕ್ತ ಎಂದು ಮೋಟಮ್ಮ ತಿಳಿಸಿದ್ದಾರೆ.
ಮಹಿಳಾ ಕೆಟಗರಿಯಲ್ಲಿ ನನ್ನನ್ನು ಪರಿಗಣಿಸಬೇಕು, ಇಲ್ಲದಿದ್ದರೇ ಮತ್ತೊಬ್ಬ ದಲಿತ ನಾಯಕ ಕೆ.ಎಚ್ ಮುನಿಯಪ್ಪ ಅವರನ್ನು ಆಯ್ಕೆ ಮಾಡಬೇಕು ಎಂದು ಮೋಟಮ್ಮ ಒತ್ತಾಯಿಸಿದ್ದಾರೆ.
ಹುಮ್ನಾಬಾದ್ ಶಾಸಕ ರಾಜಶೇಖರ್ ಪಾಟೀಲ್ ದೆಹಲಿಯಲ್ಲಿ ಬೀಡುಬಿಟ್ಟಿದ್ದು, ಸಂಪುಟ ಪುನಾರಚನೆ ವೇಳೆ  ಪಾಚೀಲ್ ಬದಲು ಈಶ್ವರ್ ಖಂಡ್ರೆಗೆ  ಸ್ಥಾನ ನೀಡಿದ್ದಕ್ಕೆ ಅವರ ಬೆಂಬಲಿಗರು ಹುಮ್ನಾಬಾದ್ ನಲ್ಲಿ ಪ್ರತಿಭಟನೆ ನಡೆಸಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com