ಇಂದು ವಿಧಾನ ಪರಿಷತ್ ನಲ್ಲಿ ಬಿಜೆಪಿ ಸದಸ್ಯ ಕೋಟಾ ಶ್ರೀನಿವಾಸ್ ಪೂಜಾರಿ ಅವರ ಪ್ರಶ್ನೆಗೆ ಉತ್ತರಿಸಿದ ಆರೋಗ್ಯ ಸಚಿವರು, ಈಗಾಗಲೇ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಿದ್ದು, ಅದನ್ನು ವಿಧಾನ ಪರಿಷತ್‌ನಲ್ಲೂ ಮಂಡಿಸಿ ಸದನದ ಒಪ್ಪಿಗೆ ಪಡೆದು ವಿಧೇಯಕವನ್ನು ಜಾರಿ ಮಾಡುತ್ತೇವೆ. ಇದರಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.