ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲ ಮನ್ನಾ ಇಲ್ಲ ಎನ್ನುವ ಯಡಿಯೂರಪ್ಪ ರೈತ ವಿರೋಧಿ: ಸಿಎಂ

ಕೇಂದ್ರ ಸರ್ಕಾರ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿರುವ ರೈತ ಸಾಲ ಮನ್ನಾ ಮಾಡುವುದಿಲ್ಲ ಎನ್ನುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ....
ಸಿದ್ದರಾಮಯ್ಯ
ಸಿದ್ದರಾಮಯ್ಯ
ಕೊಪ್ಪಳ: ಕೇಂದ್ರ ಸರ್ಕಾರ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿರುವ ರೈತ ಸಾಲ ಮನ್ನಾ ಮಾಡುವುದಿಲ್ಲ ಎನ್ನುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರದ್ದು ರೈತ ವಿರೋಧಿ ನೀತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ.
ಇಂದು ಕೊಪ್ಪಳದಲ್ಲಿ ವರದಿಗಾರರೊಂದಿಗೆ ಮಾತನಾಡಿದ ಸಿಎಂ, ಯಡಿಯೂರಪ್ಪ ಅವರು ಇಷ್ಟು ದಿನ ಸಹಕಾರಿ ಬ್ಯಾಂಕ್ ಗಳ ರೈತರ ಸಾಲ ಮನ್ನಾಕ್ಕೆ ಒತ್ತಾಯಿಸುತ್ತಿದ್ದರು. ಅಲ್ಲದೆ ಮೊದಲ ನೀವು ಸಹಕಾರಿ ಬ್ಯಾಂಕ್ ಸಾಲ ಮನ್ನಾ ಮಾಡಿ, ನಂತರ ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲದ ಬಗ್ಗೆ ಮಾತನಾಡಿದ ಎಂದಿದ್ದರು. ಆದರೆ ಈಗ ರಾಷ್ಟ್ರೀಕೃತ ಬ್ಯಾಂಕ್ ಸಾಲ ಮನ್ನಾ ಅಸಾಧ್ಯ ಎನ್ನುತ್ತಿರುವುದು ಅವರ ರೈತ ವಿರೋಧಿ ನೀತಿಗೆ ಸಾಕ್ಷಿ ಎಂದಿದ್ದಾರೆ.
ಕೇಂದ್ರ ಸರ್ಕಾರಕ್ಕೆ ರಾಜ್ಯದ ರೈತರ ಬಗ್ಗೆ ಕಾಳಜಿ ಎಲ್ಲ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಇದೇ ವೇಳೆ ಮಾಜಿ ಸಂಸದ ಎಚ್ ವಿಶ್ವನಾಥ್ ಅವರು ಕಾಂಗ್ರೆಸ್ ತೊರೆದಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಇದರಿಂದ ಪಕ್ಷಕ್ಕೆ ಯಾವುದೇ ನಷ್ಟವಿಲ್ಲ. ಪಕ್ಷಕ್ಕೆ ಬರೋರು, ಹೋಗುವವರು ಇದ್ದೇ ಇರುತ್ತಾರೆ ಎಂದು ಹೇಳಿದ್ದಾರೆ.
ಎರಡು ದಿನಗಳ ಹಿಂದೆ ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಯಡಿಯೂರಪ್ಪ, ರೈತರ ಸಾಲ ಮನ್ನಾ ವಿಚಾರ ಆಯಾ ರಾಜ್ಯಗಳಿಗೆ ಬಿಟ್ಟಿದ್ದೆ ಹೊರತು ಕೇಂದ್ರದಿಂದ ರೈತರ ಸಾಲ ಮನ್ನಾ ಮಾಡುವ ಯಾವುದೇ ಯೋಚನೆ ಇಲ್ಲ ಎಂದು ಹೇಳಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com