ಮಾಜಿ ಸಿಎಂ ಎಚ್.ಡಿ ಕುಮಾರ ಸ್ವಾಮಿಗೆ ಅನಾರೋಗ್ಯ: ವಿಕ್ರಂ ಆಸ್ಪತ್ರೆಗೆ ದಾಖಲು

ಅನಾರೋಗ್ಯದಿಂದಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ...
ಎಚ್,ಡಿ ಕುಮಾರಸ್ವಾಮಿ
ಎಚ್,ಡಿ ಕುಮಾರಸ್ವಾಮಿ
Updated on

ಬೆಂಗಳೂರು: ಅನಾರೋಗ್ಯದಿಂದಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಜ್ವರ, ಕೆಮ್ಮು ಹಾಗೂ ಉಸಿರಾಟದ ತೊಂದರೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ಕೆಲವು ದಿನಗಳಿಂದ  ಕುಮಾರಾಸ್ವಾಮಿ ಚಿತ್ರದುರ್ಗ, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳ ಪ್ರವಾಸ ಮಾಡಿದ್ದರು. ಬಿಸಿಲಿನ ತಾಪ ಹಾಗೂ ನಿರಂತರ ಪ್ರಯಾಣ ಜೊತೆಗೆ ಹೋದಲ್ಲೆಲ್ಲಾ ಅಭಿಮಾನಿಗಳು ಪಟಾಕಿ ಸಿಡಿಸಿದ್ದರಿಂದ ಅದರ ಹೊಗೆಯಿಂದಾಗಿ ಕೆಮ್ಮು ಜ್ವರ ಬಂದಿದೆ ಎಂದು ಕುಮಾರಸ್ವಾಮಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವೈದ್ಯರು 5 ದಿನಗಳ ಕಾಲ ವಿಶ್ರಾಂತಿ ಪಡೆಯಲು ಸೂಚಿಸಿರುವುದರಿಂದ ಈ ಮೊದಲೇ ನಿಗದಿ ಪಡಿಸಿದ್ದ ಎಲ್ಲಾ ಕಾರ್ಯಕ್ರಮಗಳನ್ನು ಕುಮಾರಸ್ವಾಮಿ ರದ್ದು ಪಡಿಸಿದ್ದಾರೆ.

ಕುಮಾರ ಸ್ವಾಮಿ ಅವರಿಗೆ ಅವಶ್ಯಕವಿರುವ ಎಲ್ಲಾ ಪರೀಕ್ಷೆಗಳನ್ನು ನಡೆಸಲಾಗಿದೆ.  ಅವರಿಗೆ ಜೀವ ನಿರೋಧಕ ಔಷಧಿ ನೀಡುತ್ತಿದ್ದು, ಅದಕ್ಕೆ ಕುಮಾರಸ್ವಾಮಿ ಅವರು ಸ್ಪಂದಿಸುತ್ತಿದ್ದಾರೆ. ಇನ್ನೆರಡು ದಿನಗಳಲ್ಲಿ ಅವರನ್ನು ಡಿಸ್ಚಾರ್ಜ್ ಮಾಡಲಾಗುವುದು ಎಂದು ವಿಕ್ರಂ ಆಸ್ಪತ್ರೆ ವೈದ್ಯ ಡಾ.ಕೆ.ಎಸ್ ಸತೀಶ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com