

ಬೆಂಗಳೂರು: ಹಲವು ಕಾಂಗ್ರೆಸ್ ಮುಖಂಡರು ತಮ್ಮ ಪಕ್ಷ ತೊರೆದು ಬಿಜೆಪಿ ಸೇರುತ್ತಿದ್ದಾರೆ. ಬಿಜೆಪಿ ಸೇರುವವರ ಸಂಖ್ಯೆ ಹೆಚ್ಚುತ್ತಲೇ ಇದೆ.
ಬುಧವಾರ ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಕಾಂಗ್ರೆಸ್ ಮಾಜಿ ಸಂಸದ ಜಯ ಪ್ರಕಾಶ್ ಹೆಗಡೆ, ಹೊಸಪೇಟೆ ಮಾಜಿ ಶಾಸಕ ರತನ್ ಸಿಂಗ್ ಮತ್ತು ಮೂಡಬಿದಿರಿ ಕಾಂಗ್ರೆಸ್ ಮುಖಂಡ ಮೆಘನಾಥ್ ಶೆಟ್ಟಿ ಬಿಜೆಪಿ ಸೇರಿದ್ದಾರೆ.
ಕಾಂಗ್ರೆಸ್ ನಾಯಕರನ್ನು ಪಕ್ಷಕ್ಕೆ ಸ್ವಾಗತಿಸಿದ ನಂತರ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ, ಕರಾವಳಿ ಭಾಗದಲ್ಲಿ ಜಯ ಪ್ರಕಾಶ್ ಹೆಗಡೆ ಅವರು ಪ್ರಭಾವಿ ನಾಯಕ, ಅವರ ಸೇರ್ಪಡೆಯಿಂದ ಆ ಭಾಗದಲ್ಲಿ ಪಕ್ಷವನ್ನು ಬಲಪಡಿಸಬಹುದು ಎಂದು ಹೇಳಿದ್ದಾರೆ.
ಮಾರ್ಚ್ 18 ರಂದು ಉಡುಪಿಯಲ್ಲಾ ಬೃಹತ್ ಸಮಾವೇಶ ಏರ್ಪಡಿಸಲಾಗಿದೆ, ಅಂದು ಮತ್ತಷ್ಟು ನಾಯಕರು ಬಿಜೆಪಿ ಸೇರಲಿದ್ದಾರೆ ಎಂದು ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ನೋಟು ನಿಷೇಧ ಕಾರ್ಯವನ್ನು ಜಯಪ್ರಕಾಶ್ ಹೆಗ್ಡೆ ಬೆಂಬಲಿಸಿದ್ದಕ್ಕೆ ಅವರಿಗೆ 1 ವರ್ಷ ಕಾರಣವಿಲ್ಲದೇ ಉಚ್ಚಾಟಿಸಲಾಗಿತ್ತು ಎಂದು ಹೇಳಿದರು. ಮಾರ್ಚ್ 15 ರ ನಂತರ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಬಿಜೆಪಿ ಸೇರಲಿದ್ದಾರೆ ಎಂದು ಮಾಜಿ ಡಿಸಿಎಂ ಆರ್ .ಅಶೋಕ್ ವಿಶ್ವಾಸ ವ್ಯಕ್ತ ಪಡಿಸಿದರು.