
ಮೈಸೂರು: ನಂಜನಗೂಡು ಮತ್ತು ಗುಂಡ್ಲುಪೇಟೆ ವಿಧಾನಸಭೆ ಕ್ಷೇತ್ರಗಳಿಗೆ ಏಪ್ರಿಲ್ 9 ರಂದು ನಡೆಯುವ ಉಪ ಚುನಾವಣೆ, 2018ರ ವಿಧಾನಸಭೆ ಚುನಾವಣೆಯ ದಿಕ್ಸೂಚಿ ಎಂದು ಹೇಳಲಾಗುತ್ತಿದೆ.
ಮುಂದಿನ ತಿಂಗಳು ಈ ಎರಡು ಕ್ಷೇತ್ರಗಳಲ್ಲಿ ನಡೆಯುವ ಚುನಾವಣೆ ಸಿಎಂ ಸಿದ್ದರಾಮಯ್ಯ ಪಾಲಿಗೆ ಅಗ್ನಿ ಪರೀಕ್ಷೆಯಾಗಲಿದೆ, ಈ ಚುನಾವಣೆ ಫಲಿತಾಂಶ 2018 ಚುನಾವಣೆಗೆ ಹಿಡಿದ ಕನ್ನಡಿಯಾಗಿದೆ.
ನಂಜನಗೂಡು ಮತ್ತು ಗುಂಡ್ಲುಪೇಟೆ ವಿಧಾನಸಭೆ ಕ್ಷೇತ್ರಗಳಲ್ಲಿ ವೀರಶೈವ ಮತ್ತು ದಲಿತ ಸಮುದಾಯದ ಪ್ರಾಬಲ್ಯ ಹೆಚ್ಚು. ದಶಕಗಳಿಂದಲೂ ಈ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾರುಪತ್ಯವೇ ಇದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಕಾಂಗ್ರೆಸ್ ಹೈಕಮಾಂಡ್ ಗೆ ಸಿಎಂ ಸಿದ್ದರಾಮಯ್ಯ ಕಿಕ್ ಬ್ಯಾಕ್ ನೀಡಿದ್ದು ಹಾಗೂ ಡೈರಿ ಪ್ರಕರಣದ ಆರೋಪಗಳಿಂದ ಬೇಸತ್ತಿರುವ ಕೆಲ ಕಾಂಗ್ರೆಸ್ ನಾಯಕರು ಈ ಎರಡು ಉಪಚುನಾವಣೆಗಳಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ.
ಕಾಂಗ್ರೆಸ್ ಮುಖಂಡರುಗಳಾದ ಕೃಷ್ಣಪ್ಪ, ಜಾಫರ್ ಷರೀಫ್, ಜನಾರ್ಧನ ಪೂಜಾರಿ ಮತ್ತು ಎಚ್ ವಿಶ್ವನಾಥ್ ಸಿಎಂ ಸಿದ್ದರಾಮಯ್ಯ ಕಾರ್ಯವೈಖರಿಯಿಂದ ಅಸಮಾಧಾನಗೊಂಡಿದ್ದಾರೆ. ಇನ್ನೂ ಪಕ್ಷದೊಳಗಿನ ಆಂತರಿಕ ಕಲಹ, ಅಧಿಕಾರ ವಿರೋಧಿ ಅಂಶಗಳು ಹಾಗೂ ಸ್ಟೀಲ್ ಬ್ರಿಡ್ಜ್ ಗಾಗಿ ಲಂಚ ಆರೋಪಗಳು ಮುಂದಿನ ಚುನಾವಣೆಯಲ್ಲಿ ಹಿನ್ನೆಡೆಯಾಗಲು ಕಾರಣವಾಗಬಹುದು ಎಂದು ಪಂಡಿತರು ವಿಶ್ಲೇಷಿಸಿದ್ದಾರೆ.
ಒಕ್ಕಲಿಗೇತರ ಕ್ಷೇತ್ರಗಳಾದ ಹಳೇ ಮೈಸೂರು ಪ್ರಾಂತ್ಯದಲ್ಲಿ ತನ್ನ ಅಸ್ಥತ್ವ ಸ್ಥಾಪಿಸಲು ಜೆಡಿಎಸ್ ಹವಣಿಸುತ್ತಿದೆ. 2013 ರಲ್ಲಿ ಗುಂಡ್ಲುಪೇಟೆ ವಿಧಾನ ಸಭೆ ಚುನಾವಣೆ ಸಭೆಯಲ್ಲಿ ಸೋಲನುಭವಿಸಿದ್ದ ಜೆಡಿಎಸ್ ಅಭ್ಯರ್ಥಿ ನಿರಂಜನ್ ಕುಮಾರ್ ಈ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿಯಿಲ್ಲ ಎಂದು ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ಮತ್ತು ಶ್ರೀನಿವಾಸ್ ಪ್ರಸಾದ್ ನಡುವಿನ ವೈಮಷ್ಯದಿಂದಾಗಿ ನಂಜನಗೂಡು ವಿಧಾನಸಭೆ ಕ್ಷೇತ್ರದಲ್ಲಿ ಹೈ ವೊಲ್ಟೇಜ್ ಪ್ರಚಾರ ಕಾರ್ಯ ನಡೆಯಲಿದೆ. ಸಿಎಂ ಸಿದ್ದರಾಮಯ್ಯಗೆ ಇದು ಪ್ರತಿಷ್ಠೆಯ ವಿಷಯವಾಗಿರುವುದರಿಂದ ತಾವೇ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ.
ಸಿಎಂ ಸಿದ್ದರಾಮಯ್ಯ ತಮ್ಮ ಆಪ್ತರಾದ ಎಚ್ ಸಿ ಮಹಾದೇವಪ್ಪ, ಧ್ರುವ ನಾರಾಯಣ, ಡಿ,ಕೆ ಶಿವಕುಮಾರ್ ಅವರ ಜೊತೆಗೂಡಿ ನಂಜನಗೂಡು ಮತ್ತು ಗುಂಡ್ಲು ಪೇಟೆ ಕ್ಷೇತ್ರಗಳ ಚುನಾವಣಾ ಉಸ್ತುವಾರಿಯನ್ನು ಸ್ವತಃ ತಾವೇ ನೋಡಿಕೊಳ್ಳಲಿದ್ದಾರೆ.
Advertisement