
ಮೈಸೂರು: ಶತೃಗಳ ಶತೃ ಮಿತ್ರ ಎಂಬ ಗಾದೆಯಂತೆ ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಕಾಂಗ್ರೆಸ್ ನಾಯಕರು ನಂಜನಗೂಡು ವಿಧಾನಸಭೆ ಉಪ ಚುನಾವಣೆಯಲ್ಲಿ ಈ ಮಾತನ್ನು ಸತ್ಯವಾಗಿಸಲು ಹೊರಟಿದ್ದಾರೆ.
ನಂಜನಗೂಡು ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಅವರ ಬದ್ಧ ವೈರಿ ಬೆಂಕಿ ಮಹದೇವು ಅವರ ಕುಟುಂಬಸ್ಥರನ್ನು ಓಲೈಸಲು ಕಾಂಗ್ರೆಸ್ ಮುಂದಾಗಿದೆ. ಆ ಮೂಲಕ ಲಿಂಗಾಯತ ಮತಗಳನ್ನು ಸೆಳೆಯಲು ಯತ್ನಿಸುತ್ತಿದೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಶಿಕ್ಷಣ ಸಚಿವ ತನ್ವೀರ್ ಸೇಠ್, ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಮಹದೇವು ಅವರ ಮನೆಗೆ ತೆರಳಿ ಅವರ ಕುಟುಂಬಸ್ಥರ ಸಹಕಾರ ಕೋರಿದ್ದಾರೆ. ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕಳಲೆ ಕೇಶವಮೂರ್ತಿ ಅವರಿಗೆ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ.
ನಂಜನಗೂಡಿನಲ್ಲಿ ಪ್ರಾಬಲ್ಯವಿರು ಬಿಜೆಪಿ ಸಮುದಾಯದ ಮತ ಸೆಳೆಯಲು ಯಡಿಯೂರಪ್ಪ ನಿರಂತರವಾಗಿ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ. ಲಿಂಗಾಯತ ಮತದಾರರನ್ನು ಸೆಳೆಯುವುದು ಕಠಿಣ ಕೆಲಸ ಎಂದು ತಿಳಿದಿರುವ ಕಾಂಗ್ರೆಸ್ ಇಬ್ಬರು ನಾಯಕರುಗಳ ದ್ವೇಷವನ್ನು ಬಂಡವಾಳವನ್ನಾಗಿಸಿಕೊಳ್ಳಲು ಹೊರಟಿದೆ.
ಶ್ರೀನಿವಾಸ್ ಪ್ರಸಾದ್ ಅವರ ವೈರಿ ಬೆಂಕಿ ಮಹದೇವು ಕುಟುಂಬದ ಬೆಂಬಲ ಪಡೆದರೇ ಲಿಂಗಾಯತ ಮತಗಳನ್ನು ತನ್ನತ್ತ ಸೆಳೆಯಬಹುದು ಎಂಬುದು ಕಾಂಗ್ರೆಸ್ ಲೆಕ್ಕಾಚಾರ.
ಬೆಂಕಿ ಮಹಾದೇವು ಅವರ ಫೋಟೋಗಳನ್ನು ಚುನಾವಣಾ ಪ್ರಚಾರದಲ್ಲಿ ಬಳಸಿಕೊಳ್ಲಲು ಪತ್ನಿ ರಾಜಮ್ಮ ಅವರ ಅನುಮತಿ ಕೋರಿದ್ದೇವೆ, ಅದಕ್ಕೆ ಅವರು ಒಪ್ಪಿಗೆ ನೀಡಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಆದರೆಈ ನಿರ್ಧಾರ ಮಹದೇವು ಅವರ ಬೆಂಬಲಿಗರಿಗೆ ತಪ್ಪು ಸಂದೇಷ ನೀಡಲಿದೆ, ಏಕೆಂದರೆ ಮಹದೇವು ಅವರ ಅಳಿಯ ಜಯದೇವ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಪ್ರಸಾದ್ ಅವರ ಪರ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ.
ಶ್ರೀನಿವಾಸ್ ಪ್ರಸಾದ್ ಮತ್ತು ಬೆಂಕಿ ಮಹದೇವು ನಡುವಿನ ಕಡಿಮೆ ಮಾಡಲು ಯತ್ನಿಸುತ್ತಿರುವ ಬಿಜೆಪಿ ಮುಖಂಡರು, ಮಹದೇವು ಅವರ ಮನೆಗೆ ಒಮ್ಮೆ ಭೇಟಿ ನೀಡುವಂತೆ ಶ್ರೀನಿವಾಸ್ ಪ್ರಸಾದ್ ಅವರಿಗೆ ಒತ್ತಡ ಹಾಕಿದ್ದಾರೆ. ಆದರೆ ಇದಕ್ಕೆ ಶ್ರಿನಿವಾಸ್ ಪ್ರಸಾದ್ ಇದಕ್ಕೆ ಸುತರಾ ಒಪ್ಪಲಿಲ್ಲ ಎಂದು ಮೂಲಗಳು ತಿಳಿಸಿವೆ
Advertisement