ಮೈಸೂರು: ನಂಜನಗೂಡು ಮತ್ತು ಗುಂಡ್ಲಪೇಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಕಣ ರಂಗೇರತೊಡಗಿದ್ದು ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳು ಅದ್ಧೂರಿ ಮೆರವಣಿಗೆ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಹಾಗೂ ವಿಪಕ್ಷ ಬಿಜೆಪಿಗೆ ನಂಜನಗೂಡು ಮತ್ತು ಗುಂಡ್ಲುಪೇಟೆ ಪ್ರತಿಷ್ಠೆಯ ಕಣವಾಗಿದ್ದು, ನಂಜನಗೂಡು ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಕಳಲೆ ಕೇಶವಮೂರ್ತಿ ಮತ್ತು ಬಿಜೆಪಿಯಿಂದ ವಿ. ಶ್ರೀನಿವಾಸ್ ಪ್ರಸಾದ್ ನಾಮಪತ್ರ ಸಲ್ಲಿಸಿದ್ದಾರೆ.
ಗುಂಡ್ಲುಪೇಟೆ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಗೀತಾ ಮಹದೇವಪ್ರಸಾದ್ ಮತ್ತು ಬಿಜೆಪಿಯಿಂದ ನಿರಂಜನ್ ಕುಮಾರ್ ನಾಮಪತ್ರ ಸಲ್ಲಿಸಿದ್ದಾರೆ.
ಸಹಕಾರ ಸಚಿವ ಎಚ್.ಎಸ್ ಮಹದೇವ ಪ್ರಸಾದ್ ಅವರ ಅಕಾಲಿಕ ನಿಧನದಿಂದಾಗಿ ಗುಂಡ್ಲುಪೇಟೆ ಮತ್ತು ಸಚಿವ ಸ್ಥಾನ ವಂಚಿತರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಡ್ಡು ಹೊಡೆದು ಶಾಸಕ ಸ್ಥಾನಕ್ಕೆ ವಿ. ಶ್ರೀನಿವಾಸ್ ಪ್ರಸಾದ್ ಬಿಜೆಪಿ ಸೇರ್ಪಡೆಗೊಂಡಿದ್ದರಿಂದ ಈ ಎರಡು ಕ್ಷೇತ್ರಗಳಲ್ಲೂ ಉಪ ಚುನಾವಣೆ ನಡೆಯುತ್ತಿದೆ.