ಕೃಷ್ಣ ಅವರು ಮಾರ್ಚ್ 15ರ ಬಿಜೆಪಿ ಸೇರುವ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ ಅವರ ಸೋದರಿ ಸುನೀತಾ ಅವರು ನಿಧನರಾದ ಹಿನ್ನಲೆಯಲ್ಲಿ ಕೃಷ್ಣ ಅವರು ತಕ್ಷಣವೇ ದೆಹಲಿಯಿಂದ ಬೆಂಗಳೂರಿಗೆ ಹಿಂತಿರುಗಿದ್ದರು. ಜನವರಿ ತಿಂಗಳಿನಲ್ಲಿ ಕಾಂಗ್ರೆಸ್ ಗೆ ರಾಜಿನಾಮೆ ನೀಡಿದ್ದ ಕೃಷ್ಣ ಅವರಿಗೆ ಬಿಎಸ್ ಯಡಿಯೂರಪ್ಪ ಅವರು ಬಿಜೆಪಿ ಸೇರುವಂತೆ ಆಹ್ವಾನ ನೀಡಿದ್ದರು.