ಗುಂಡ್ಲುಪೇಟೆಯಲ್ಲಿ ಪೊಲೀಸ್ ವಾಹನಗಳಲ್ಲಿ ಹಣ ತಂದು ಜನರಿಗೆ ಹಂಚಲಾಗುತ್ತಿದೆ: ಯಡಿಯೂರಪ್ಪ

ಪೊಲೀಸ್ ವಾಹನಗಳಲ್ಲಿ ಹಣ ತಂದು ಕಾಂಗ್ರೆಸ್ ಕಾರ್ಯಕರ್ತರು ಗುಂಡ್ಲುಪೇಟೆಯಲ್ಲಿ ಜನರಿಗೆ ಹಂಚುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ...
ಯಡಿಯೂರಪ್ಪ ಮತ್ತು ಗೀತಾ ಮಹಾದೇವ ಪ್ರಸಾದ್
ಯಡಿಯೂರಪ್ಪ ಮತ್ತು ಗೀತಾ ಮಹಾದೇವ ಪ್ರಸಾದ್

ಮೈಸೂರು: ಪೊಲೀಸ್ ವಾಹನಗಳಲ್ಲಿ ಹಣ ತಂದು ಕಾಂಗ್ರೆಸ್ ಕಾರ್ಯಕರ್ತರು  ಗುಂಡ್ಲುಪೇಟೆಯಲ್ಲಿ ಜನರಿಗೆ ಹಂಚುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಆರೋಪಿಸಿದ್ದಾರೆ.

ಗುಂಡ್ಲುಪೇಟೆ ವಿಧಾನಸಭೆ ಕಾಂಗ್ರೆಸ್ ಅಭ್ಯರ್ಥಿ ಗೀತಾ ಮಹಾದೇವ ಪ್ರಸಾದ್ ಅವರ ಚುನಾವಣಾ ಪ್ರಚಾರದ ವೇಳೆ ಪೊಲೀಸ್ ಅಧಿಕಾರಿಗಳು ಅವರನ್ನು ಹಿಂಬಾಲಿಸಿ ಮತದಾರರಿಗೆ ಹಣ ಹಂಚುತ್ತಿದ್ದಾರೆ ಎಂದು ದೂರಿದ್ದಾರೆ,

ಗುಂಡ್ಲುಪೇಟೆಯ ಬೆರಂಬಾಡಿಯಲ್ಲಿ ಚುನಾವಣಾ ರ್ಯಾಲಿ ಉದ್ಘಾಟಿಸಿ ಮಾತನಾಡಿದ ಯಡಿಯೂರಪ್ಪ, ಗೀತಾ ಮಹಾದೇವ ಪ್ರಸಾದ್ ಪರ ಪೊಲೀಸರು ಹಣ ಹಂಚುತ್ತಿರುವ ಸಂಬಂಧ ನಾನು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ಮಾಹಿತಿ ನೀಡುತ್ತೇನೆ. ಪೊಲೀಸರು ಹಣ ಹಂಚುವುದನ್ನು ನಿಲ್ಲಿಸಬೇಕೆಂದು ನಾನು ಆಗ್ರಹಿಸುತ್ತೇನೆ ಎಂದು ಹೇಳಿದ್ದಾರೆ.

ಚುನಾವಣಾ ಪ್ರಚಾರದ ವೇಳೆ ಪೊಲೀಸರು ಪಕ್ಷವೊಂದರ ಪರ ಕೆಲಸ ಮಾಡುತ್ತಿರುವುದರ ಬಗ್ಗೆ ಕೇಂದ್ರ ಚುನಾವಣಾ ಆಯೋಗ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿರುವ ಯಡಿಯೂರಪ್ಪ ಗೀತಾ ಮಹಾದೇವ್ ಪ್ರಸಾದ್ ತಮ್ಮ ಆಸ್ತಿಯನ್ನು ರಕ್ಷಿಸಿಕೊಳ್ಳಲು ಉಪ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ, ಇಲ್ಲಿ ಯಾವುದೇ ಕರುಣೆಯ ಅಲೆ ಇಲ್ಲ ಎಂದು ಹೇಳಿದ್ದಾರೆ.

ಮಾಜಿ ಸಿಎಂ ಎಸ್.ಎಂ ಕೃಷ್ಣ ಬಿಜೆಪಿ ಸೇರ್ಪಡೆಯಿಂದಾಗಿ ಬೆಂಗಳೂರು ನಗರದಲ್ಲಿ ಬಿಜೆಪಿ ಮತ್ತಷ್ಟು ಬಲಗೊಳ್ಳುತ್ತದೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಬಿಜೆಪಿ ನಾಯಕರು ತಮ್ಮ ವಿರುದ್ಧ ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ, ಅವರು ಮಾಡುತ್ತಿರುವ ಆರೋಪಗಳೆಲ್ಲವೂ ನಿರಾಧಾರ. ನನಗೆ ಯಾವುದೇ ಸಿಂಪಥಿಯ ಅವಶ್ಯಕತೆಯಿಲ್ಲ,  ನನ್ನ ಪತಿ ಮಾಡಿರುವ ಅಭಿವೃದ್ಧಿ ಕೆಲಸಗಳೇ  ನನ್ನನ್ನು ಕಾಪಾಡುತ್ತೆ,  ಪೊಲೀಸ್ ವಾಹನಗಳಲ್ಲಿ ಹಣ ಹಂಚುತ್ತಿದ್ದಾರೆ ಎಂದು ಯಡಿಯೂರಪ್ಪ ಆರೋಪ ಮಾಡಿದ್ದಾರೆ, ಅವರ ಬಳಿ ಸೂಕ್ತ ಸಾಕ್ಷ್ಯಾಧಾರಗಳಿದ್ದರೇ ಅವರು ಚುನವಣಾ ಆಯೋಗಕ್ಕೆ ದೂರು ನೀಡಲಿ ಎಂದು ಸವಾಲು ಹಾಕಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com