ಬದನವಾಳು: ಕೋಮು ಸಾಮರಸ್ಯ ಸಾರಲು ದ್ವೇಷ ಮರೆತು ಒಂದಾದರು!

ಬದನವಾಳು ಗ್ರಾಮದಲ್ಲಿ 1993ರಲ್ಲಿ ನಡೆದ ಜಾತಿ ಸಂಘರ್ಷದ ಕಹಿ ನೆನಪುಗಳನ್ನು ಮರೆಸಲು ಹಾಗೂ ಕೋಮು ಸಾಮರಸ್ಯ ಸಾರಲು ಬಿಜೆಪಿ ನಾಯಕರು...
ನಂಜನಗೂಡಿನಲ್ಲಿ ಪ್ರಚಾರದಲ್ಲಿ ತೊಡಗಿರುವ ಯಡಿಯೂರಪ್ಪ ಮತ್ತು ಶ್ರೀನಿವಾಸ್ ಪ್ರಸಾದ್
ನಂಜನಗೂಡಿನಲ್ಲಿ ಪ್ರಚಾರದಲ್ಲಿ ತೊಡಗಿರುವ ಯಡಿಯೂರಪ್ಪ ಮತ್ತು ಶ್ರೀನಿವಾಸ್ ಪ್ರಸಾದ್
Updated on

ಮೈಸೂರು; ಬದನವಾಳು ಗ್ರಾಮದಲ್ಲಿ 1993ರಲ್ಲಿ ನಡೆದ ಜಾತಿ ಸಂಘರ್ಷದ ಕಹಿ ನೆನಪುಗಳನ್ನು ಮರೆಸಲು ಹಾಗೂ ಕೋಮು ಸಾಮರಸ್ಯ ಸಾರಲು ಬಿಜೆಪಿ ನಾಯಕರು, ದಲಿತ ಮತ್ತು ವೀರಶೈವ ಸಮುದಾಯಗಳ ಸಭೆ ನಡೆಸಿ ಪಥ ಸಂಚಲನ ಆಯೋಜಿಸಿತ್ತು.

ಈ ಸಭೆ ಮತ್ತು ಪಥ ಸಂಚಲನದಲ್ಲಿ ಅಪಾರ ಪ್ರಮಾಣದಲ್ಲಿ ದಲಿತರು ಹಾಗೂ ಲಿಂಗಾಯತರು ಭಾಗವಹಿಸಿ ಅನ್ಯ ಪಕ್ಷಗಳ ರಾಜಕೀಯ ನಾಯಕರಿಗೆ ಆಶ್ಚರ್ಯ ಉಂಟು ಮಾಡಿದರು. ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಮತ್ತು ನಂಜನ ಗೂಡು ವಿಧಾನಸಭೆ ಉಪಚುನಾವಣೆ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಪ್ರಸಾದ್ ಬದನವಾಳು ಗ್ರಾಮದಲ್ಲಿ ಲಿಂಗಾಯತ ಮತ್ತು ದಲಿತ ಸಮುದಾಯಗಳ ಸಾಮರಸ್ಯಕ್ಕಾಗಿ ಪಥ ಸಂಚಲನ ನಡೆಸಿದರು.

ಎರಡು ಸಮುದಾಯಗಳ ನಡುವೆ ನಡೆದ ಸಂಘರ್ಷದಿಂದಾಗಿ ಕೆಲ ವರ್ಷಗಳ ಹಿಂದೆ ಸರ್ಕಾರ ಬದನವಾಳು ಗ್ರಾಮದಲ್ಲಿ ಪೊಲೀಸ್ ಠಾಣೆ ಸ್ಥಾಪಿಸಿ ಸಿಬ್ಬಂದಿಯನ್ನು ನಿಯೋಜಿಸಿತ್ತು. ಆದರೆ ನಿನ್ನೆ ನಡೆದ ಎರಡು ಸಮುದಾಯಗಳ ಪಥ ಸಂಚಲನದಲ್ಲಿ ಬಹಳ ಸೂಕ್ಷ್ಮ ಪ್ರದೇಶವೆಂದು ಗುರುತಿಸಿತಕೊಂಡಿದ್ದ ಬದನವಾಳು ಗ್ರಾಮದಲ್ಲಿ ಪೊಲೀಸರು ಕರ್ತವ್ಯದ ಮೇಲೆ ಇರಲಿಲ್ಲ, ಇದು ಎಲ್ಲರಲ್ಲೂ ಆಶ್ಚರ್ಯ ಮೂಡಿಸಿತ್ತು.

1918 ರಲ್ಲಿ ರಾಷ್ಟ್ರ ಪಿತ ಮಹಾತ್ಮ ಗಾಂಧಿ ಬದನವಾಳು ಗ್ರಾಮಕ್ಕೆ ಭೇಟಿ ನೀಡಿದ್ದರು. ಆದರೆ  ಬದನವಾಳು ಗ್ರಾಮದಲ್ಲಿ ಹೇಳಿಕೊಳ್ಳುವಂತ ಪ್ರಮಾಣದ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ. 2018 ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೇ ಈ ಭಾಗಲದಲ್ಲಿ ಏತ ನೀರಾವರಿ ಯೋಜನೆ ಅನುಷ್ಠಾನಗೊಳಿಸುವುದಾಗಿ ಅವರು ಭರವಸೆ ನೀಡಿದ್ದಾರೆ.

ಇನ್ನೂ ನಂಜನಗೂಡು ವಿಧಾನ ಸಭಾ ಕ್ಷೇತ್ರದ ಹಲವು ಗ್ರಾಮಗಳಲ್ಲಿ  ಕಾಂಗ್ರೆಸ್ ಮತ್ತು ಬಿಜೆಪಿ ಬಿರುಸಿನ ಪ್ರಚಾರ ನಡೆಸಿವೆ, ಕಾಂಗ್ರೆಸ್ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಪ್ರಸಾದ್ ವಿರುದ್ಧ ವಾಗ್ದಾಳಿ ನಡೆಸಿದೆ. ದಲಿತ ಮತ್ತು ಉಪ್ಪಾರ ಸಮುದಾಯ ಪ್ರಾಬಲ್ಯವುಳ್ಳ ಅನೇಕ ಗ್ರಾಮಗಳಲ್ಲಿ ಯಡಿಯೂರಪ್ಪ ಮತ್ತು ಶ್ರೀನಿವಾಸ್ ಪ್ರಸಾದ್ ಪ್ರಚಾರ ನಡೆಸಿದ್ದಾರೆ.

ಸಿಎಂ ವಿರುದ್ಧ ಮಾನನಷ್ಟ ಮೊಕದ್ದಮೆ ಎಚ್ಚರಿಕೆ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವ ಎಚ್ಚರಿಕೆ ನೀಡಿದ್ದಾರೆ. ತಾವು ಹೈಕೋರ್ಟ್ ನಿಂದ ನಿರಪರಾಧಿ ಎಂದು ಸಾಬೀತಾಗಿದ್ದರೂ ತಮ್ಮನ್ನು ಭ್ರಷ್ಟ ಎಂದು ಕರೆಯುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.

ಗೀತಾ ಮಹಾದೇವ ಪ್ರಸಾದ್ ವಿರುದ್ಧ ಹೇಳಿಕೆ:  ಸಂಸದ ಪ್ರತಾಪ್ ಸಿಂಹ ವಿಷಾದ

ಗುಂಡ್ಲುಪೇಟೆ ಕಾಂಗ್ರೆಸ್ ಅಭ್ಯರ್ಥಿ ಗೀತಾ ಮಹಾದೇವ ಪ್ರಸಾದ್ ವಿರುದ್ಧ ಹೇಳಿಕೆ ನೀಡಿದ್ದರ ಹಿನ್ನೆಲೆಯಲ್ಲಿ ಸಂಸದ ಪ್ರತಾಪ್ ಸಿಂಹ ಕ್ಷಮೆಯಾಚಿಸಿದ್ದಾರೆ.

ಮಾಜಿ ಸಚಿವ ದಿವಂಗತ ಮಹದೇವ್ ಪ್ರಸಾದ್‌ ಅವರ ಪತ್ನಿ ಗೀತಾ ಅವರ ವಿರುದ್ಧ ಅಸಂಬದ್ಧ ಹೇಳಿಕೆ ನೀಡಿದ್ದ ಮೈಸೂರು ಸಂಸದ ಪ್ರತಾಪ್‌ ಸಿಂಹ ಇದೀಗ ವಿಷಾದ ವ್ಯಕ್ತ ಪಡಿಸಿ ತಮ್ಮ ಹೇಳಿಕೆಯನ್ನು ಹಿಂಪಡೆದುಕೊಂಡಿದ್ದಾರೆ. ಗೀತಾ ಮಹದೇವ ಪ್ರಸಾದ್ ಅವರಿಗೆ ಅವರ ಪತಿ ಮಾಜಿ ಸಚಿವ ಮಹದೇವ ಪ್ರಸಾದ್ ಮರಣ ಹೊಂದಿದ ಮರುದಿನ ಗೂಟದ ಕಾರು ನೆನಪಾಗಿದೆ ಎಂದು ಪ್ರತಾಪ್‌ ಸಿಂಹ ಶನಿವಾರ ಹೇಳಿಕೆ ನೀಡಿದ್ದರು.

ನಿಮ್ಮ ನೋವಿಗೆ ನನ್ನ ಸಹ ಮತವಿದೆ. ಸಾಮಾನ್ಯವಾಗಿ ರಾಜಕಾರಣಿಗಳು ತೀರಿಕೊಂಡಾಗ ಅವರ ಮನೆಯವರನ್ನು ಚುನಾವಣೆಗೆ ನಿಲ್ಲಿಸಿ ಅನುಕಂಪದ ಆಧಾರದಲ್ಲಿ ಮತ ಪಡೆಯಲಾಗುತ್ತದೆ. ನೋವಿಗಿಂತ ಅಧಿಕಾರವೇ ಮುಖ್ಯವಾಯಿತೇ ಎಂದು ಪ್ರಶ್ನಿಸಿದ್ದೆ. ಅದರಾಚೆಗೆ ನನ್ನ ಹೇಳಿಕೆಯಲ್ಲಿ ಅರ್ಥವಿಲ್ಲ .ನಿಮಗೆ ನೋವಾಗಿದ್ದರೆ ವಿಷಾದ ವ್ಯಕ್ತ ಪಡಿಸುತ್ತೇನೆ, ಹೇಳಿಕೆಯನ್ನೂ ಹಿಂಪಡೆಯುತ್ತೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com