

ಬೆಂಗಳೂರು: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ಸರ್ವೋಚ್ಛ ನಾಯಕ ಎಚ್.ಡಿ ದೇವೇಗೌಡ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ವ್ಯಕ್ತಿಯ ವಿರುದ್ಧ ದೂರು ದಾಖಲಾಗಿದೆ.
ಮಾರ್ಚ್ 24 ರಂದು ಜಗದೀಶ್ ಗೌಡ ಎಂಬುವರು ತಮ್ಮ ಫೇಸ್ ಬುಕ್ ನಲ್ಲಿ ಮಾಜಿ ಪ್ರಧಾನಿ ದೇವೇಗೌಡ ದೇಶ ವಿರೋಧಿ ಮತ್ತು ದೇಶ ದ್ರೋಹಿ ಎಂಬ ಅವಹೇಳನಕಾರಿ ಪೋಸ್ಟ್ ಹಾಕಿದ್ದರು. ಜೊತೆಗೆ ಇತರ ಸಾಮಾಜಿಕ ಜಡಾಲತಾಣಗಳಿಗೊ ಪೋಸ್ಟ್ ಮಾಡಿದ್ದರು.
ಇದನ್ನು ವಿರೋಧಿಸಿ ಜೆಡಿಎಸ್ ಕಾರ್ಯಕರ್ತ ರಮೇಶ್ ಗೌಡ ಎಂಬ ದೂರು ದಾಖಲಿಸಿದ್ದು. ಜಗದೀಶ್ ಗೌಡ ಅವರ ಫೇಸ್ ಬುಕ್ ಅಕೌಂಟ್ ಬ್ಲಾಕ್ ಮಾಡಿಸಬೇಕು ಎಂದು ಸೈಬರ್ ಪೊಲೀಸರಿಗೆ ಒತ್ತಾಯಿಸಿದ್ದಾರೆ.