ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ವಿ.ಶ್ರೀನಿವಾಸ್ ಪ್ರಸಾದ್ ನೇಮಕ

ಇತ್ತೀಚಿಗೆ ನಡೆದ ನಂಜನಗೂಡು ಉಪ ಚುನಾವಣೆಯಲ್ಲಿ ಸೋಲು ಅನುಭವಿಸಿ ಚುನಾವಣಾ ರಾಜಕೀಯಕ್ಕೆ ಗುಡ್ ಬೈ ಹೇಳಿದ್ದ ಮಾಜಿ....
ವಿ.ಶ್ರೀನಿವಾಸ್ ಪ್ರಸಾದ್
ವಿ.ಶ್ರೀನಿವಾಸ್ ಪ್ರಸಾದ್
ಬೆಂಗಳೂರು: ಇತ್ತೀಚಿಗೆ ನಡೆದ ನಂಜನಗೂಡು ಉಪ ಚುನಾವಣೆಯಲ್ಲಿ ಸೋಲು ಅನುಭವಿಸಿ ಚುನಾವಣಾ ರಾಜಕೀಯಕ್ಕೆ ಗುಡ್ ಬೈ ಹೇಳಿದ್ದ ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಅವರನ್ನು ಮಂಗಳವಾರ ರಾಜ್ಯ ಬಿಜೆಪಿ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಮುಂಬರುವ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ದಲಿತ ನಾಯಕ ಶ್ರೀನಿವಾಸ್ ಪ್ರಸಾದ್ ಅವರಿಗೆ ಪಕ್ಷದ ಉನ್ನತ ಸ್ಥಾನ ನೀಡುವ ಮೂಲಕ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಅವರಿಗೆ ಟಾಂಗ್ ನೀಡಿದ್ದಾರೆ ಎನ್ನಲಾಗಿದೆ.
ಕೆಲವು ತಿಂಗಳ ಹಿಂದಷ್ಟೇ ಬಿಜೆಪಿ ಸೇರ್ಪಡೆಯಾಗಿದ್ದ ಶ್ರೀನಿವಾಸ್ ಪ್ರಸಾದ್ ಅವರು, ಉಪಚುನಾವಣೆಯಲ್ಲಿ ಸೋತಿದ್ದರೂ ಒಂದಷ್ಟು ಮತದಾರರನ್ನ ಹಿಡಿದಿಟ್ಟುಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. ಹೀಗಾಗಿ ಯಡಿಯೂರಪ್ಪ ಅವರು ದಲಿತ ನಾಯಕನಿಗೆ ಪಟ್ಟ ಕಟ್ಟುವ ಮೂಲಕ ಭಿನ್ನಮತೀಯರ ವಿರುದ್ಧ ಹೊಸ ಅಸ್ತ್ರ ಪ್ರಯೋಗಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com