ಬಿಜೆಪಿ ವರಿಷ್ಠರ ವಾರ್ನಿಂಗ್ ಗೆ ಡೋಂಟ್ ಕೇರ್ : ಬ್ರಿಗೇಡ್ ಸಭೆಗೆ ಈಶ್ವರಪ್ಪ ಸಿದ್ಧತೆ

ರಾಜ್ಯ ಬಿಜೆಪಿಯಲ್ಲಿ ಉಲ್ಬಣವಾಗಿರುವ ಭಿನ್ನಮತ ಶಮನಕ್ಕಾಗಿ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಚಟುವಟಿಕೆಗಳಿಂದ ದೂರ ಉಳಿಯುವಂತೆ ಪರಿಷತ್ ವಿರೋಧಪಕ್ಷದ ..
ಕೆ.ಎಸ್ ಈಶ್ವರಪ್ಪ
ಕೆ.ಎಸ್ ಈಶ್ವರಪ್ಪ
Updated on
ರಾಯಚೂರು: ರಾಜ್ಯ ಬಿಜೆಪಿಯಲ್ಲಿ ಉಲ್ಬಣವಾಗಿರುವ ಭಿನ್ನಮತ ಶಮನಕ್ಕಾಗಿ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಚಟುವಟಿಕೆಗಳಿಂದ ದೂರ ಉಳಿಯುವಂತೆ ಪರಿಷತ್ ವಿರೋಧಪಕ್ಷದ ನಾಯಕ ಕೆ. ಎಸ್ ಈಶ್ವರಪ್ಪ ಅವರಿಗೆ ಪಕ್ಷದ ವರಿಷ್ಠರು ಎಚ್ಚರಿಕೆ ನೀಡಿದ್ದರೂ ಅದಕ್ಕೆ ಸೆಡ್ಡು ಹೊಡೆದಿದ್ದಾರೆ.
ಮೇ 8 ರಂದು ರಾಯಚೂರಿನಲ್ಲಿ  ಬ್ರಿಗೇಡ್ ಕಾರ್ಯಕಾರಿಣಿ ಸಭೆ ನಡೆಸಲು ಈಶ್ವರಪ್ಪ ತೀರ್ಮಾನಿಸಿದ್ದಾರೆ. ಈ ಸಭೆಯಲ್ಲಿ 1  ಸಾವಿರಕ್ಕೂ ಹೆಚ್ಚು ಎಸ್ ಆರ್ ಬಿ ನಾಯಕರು ಭಾಗವಹಿಸಲಿದ್ದಾರೆ. ರಾಯಣ್ಣ ಬ್ರಿಗೇಡ್ ನ ತತ್ವ ಸಿದ್ಧಾಂತಗಳನ್ನು ಇಷ್ಟ ಪಡುವ ಅನೇಕ ಮಂದಿಗಾಗಿ ಕಾರ್ಯಾಗರ ನಡೆಸಲಾಗುವುದು ಎಂದು ಹೇಳಿದ್ದಾರೆ.
ಬಿಜೆಪಿ ರಾಜ್ಯ ಉಸ್ತುವಾರಿ ಹಾಗೂ ಪ್ರಧಾನ ಕಾರ್ಯದರ್ಶಿ ಕೆ. ಮುರುಳಿಧರ ರಾವ್ ರಾಯಣ್ಣ ಬ್ರಿಗೇಡ್ ಚಟುವಟಿಕೆಗಳಿಂದ ನಿಮಗೆ ದೂರ ಉಳಿಯುವಂತೆ ಸೂಚಿಸಿದ್ದಾರಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಈಶ್ವರಪ್ಪ,  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರೇ, ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಗಮನ ಹರಿಸುವಂತೆ ನನಗೆ ಹೇಳಿದ್ದಾರೆ. ಅವರ ಸೂಚನೆಯಂತೆ ಬ್ರಿಗೇಡ್ ಸಮಾವೇಶ ರ್ಯಾಲಿಗಳನ್ನು ನಡೆಸುತ್ತಿದ್ದೇನೆ ಎಂದು ಹೇಳಿದ್ದಾರೆ.
ಈ ತಿಂಗಳಲ್ಲಿ ಮೈಸೂರಲ್ಲಿ ಬಿಜೆಪಿ ಕಾರ್ಯಕಾರಿಣಿ  ಸಭೆಯಲ್ಲಿ ಭಾಗವಹಿಸುವಿರಾ ಎಂಬ ಪ್ರಶ್ನೆಗೆ ಉತ್ತರಿಸಿದ ಈಶ್ವರಪ್ಪ, ಈ ಸಂಬಂಧ ನನಗೆ ಯಾವುದೇ ಮಾಹಿತಿ ತಿಳಿದಿಲ್ಲ ಎಂದು ಹೇಳಿದ್ದಾರೆ.
ಶ್ರೀನಿವಾಸ್ ಪ್ರಸಾದ್ ಅವರನ್ನು ಬಿಜೆಪಿ ಉಪಾಧ್ಯಕ್ಷರನ್ನಾಗಿ ನೇಮಿಸಿರುವ ಕ್ರಮವನ್ನು ಸ್ವಾಗತಿಸಿರುವ ಅವರು, ಯಡಿಯೂರಪ್ಪ ಮುಂದಿನ ಮುಖ್ಯಮಂತ್ರಿಯಾಗುವ ದಿಸೆಯಲ್ಲಿ ಕೆಲಸ ಮಾಡುತ್ತಾರೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com